ನೋಟು ನಿಷೇಧದಿಂದ ದೇಶದ ಆರ್ಥಿಕತೆಗೆ ಧಕ್ಕೆ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಶುಕ್ರವಾರ, 6 ಜನವರಿ 2017 (15:37 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯ ನೋಟು ನಿಷೇಧವನ್ನು ಶ್ಲಾಘಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಇದರಿಂದ ತಾತ್ಕಾಲಿಕವಾಗಿ ದೇಶದ ಆರ್ಥಿಕತೆಗೆ ಧಕ್ಕೆಯಾಗಬಹುದು ಎಂದು ಹೇಳಿದ್ದಾರೆ.
 
ಕೇಂದ್ರ ಸರಕಾರ ನೋಟು ನಿಷೇಧದಿಂದ ದೀರ್ಘಾವಧಿಯಲ್ಲಿ ಲಾಭವಾಗಲಿದೆ ಎನ್ನುವ ನೆಪವೊಡ್ಡಿ ಬಡವರು, ಮಧ್ಯಮ ವರ್ಗದವರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿಸುವುದು ಸರಿಯಲ್ಲ. ಸರಕಾರ ಅಗತ್ಯ ಕ್ರಮಗಳನ್ನು ಶೀಘ್ರವಾಗಿ ಕೈಗೊಳ್ಳುವುದು ಅತ್ಯಗತ್ಯವಾಗಿದೆ ಎಂದು ಸಲಹೆ ನೀಡಿದರು.
 
ಕೇಂದ್ರ ಸರಕಾರ ನೋಟು ನಿಷೇಧ ಜಾರಿಗೊಳಿಸಿರುವುದು ಉತ್ತಮ ಕಾರ್ಯವಾಗಿದ್ದರೂ ಬಡ,ಮಧ್ಯಮ ವರ್ಗದವರ ಹಸಿವು, ನಿರುದ್ಯೋಗ ಮತ್ತು ಶೋಷಣೆಯಾಗದಂತೆ ನೋಡಿಕೊಳ್ಳುವುದು ಆದ್ಯ ಕರ್ತವ್ಯವಾಗಿದೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
 
ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ಘೋಷಣೆಯಾಗಿವೆ. ರಾಜಕೀಯ ಪಕ್ಷಗಳು ತಮ್ಮ ಜನಪ್ರಿಯತೆಯನ್ನು ಒರೆಗೆ ಒಡ್ಡಲಿವೆ. ಆಯಾ ರಾಜ್ಯಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗೌವರ್ನರ್‌ಗಳು ಜನರೊಂದಿಗೆ ಬೆರೆತು ರಾಜಕೀಯ ವೈಷಮ್ಯವನ್ನು ಅಂತ್ಯಗೊಳಿಸಲು ಪ್ರಯತ್ನಿಸುವುದು ಸೂಕ್ತ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ