ತಮಿಳುನಾಡಿಗೆ ಪ್ರತಿನಿತ್ಯ 1ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ

Sampriya

ಗುರುವಾರ, 11 ಜುಲೈ 2024 (19:00 IST)
Photo Courtesy X
ನವದೆಹಲಿ:  ರಾಜ್ಯದಲ್ಲಿ ಆಗುತ್ತಿರುವ ಉತ್ತಮ ಮಳೆಯಿಂದ  ಕೆಆರ್ ಎಸ್ ಗೆ ಈ ಬಾರಿ ನೀರು ಹರಿದುಬರುತ್ತಿರುವುದರಿಂದ ಈ ಭಾಗದ ಜನರಲ್ಲಿ ಸಂತಸ ಮನೆ ಮಾಡಿದೆ. ಇದರ ಮಧ್ಯ ಕಾವೇರಿ ನೀರು ನಿರ್ವಹಣಾ ಸಮಿತಿ, ತಮಿಳುನಾಡಿಗೆ ಜುಲೈ 31 ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಗುರುವಾರ ಸೂಚನೆ ನೀಡಿದೆ.

ಇಂದು ದೆಹಲಿಯಲ್ಲಿ ನಡೆದ CWRC ಯ 99ನೇ ಸಭೆಯಲ್ಲಿ, ಜುಲೈ 12 ರಿಂದ ಜುಲೈ 31ರ ವರೆಗೆ ಬಿಳಿಗುಂಡ್ಲುವಿನಲ್ಲಿ ಸಂಚಿತ ನೀರಿನ ಹರಿವನ್ನು ದಿನಕ್ಕೆ 1 ಟಿಎಂಸಿ (ಸರಾಸರಿ 11,500 ಕ್ಯುಸೆಕ್ಸ್ ಹರಿವು) ಇರುವಂತೆ ಕರ್ನಾಟಕವು ತನ್ನ ಜಲಾಶಯಗಳಿಂದ ನೀರಿನ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಶಿಫಾರಸು ಮಾಡಿದೆ.

ತಮಿಳುನಾಡು ಪರ ಅಧಿಕಾರಿಗಳು CWRC ಗೆ ಮನವಿ ಮಾಡಿ, ಕಳೆದ ಜಲವರ್ಷದಲ್ಲಿ ಕರ್ನಾಟಕ ನೀರು ಸರಿಯಾಗಿ ಹರಿಸಿಲ್ಲ. ಪ್ರಸಕ್ತ ಜಲವರ್ಷದಲ್ಲಿ ಮನ್ಸೂನ್ ಸಾಮಾನ್ಯವಾಗಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ನೀರು ಸಂಗ್ರಹವಾದ ಹಿನ್ನೆಲೆ ನೀರು ಹರಿಸುವಂತೆ ಶಿಫಾರಸು ಮಾಡಿದ್ದಾರೆ.

ಇದಕ್ಕೆ ಪ್ರತಿವಾದ ನಡೆಸಿದ ಕರ್ನಾಟಕದ ಪರ ಅಧಿಕಾರಿ,  ಕಾವೇರಿಯಲ್ಲಿ ನೀರಿನ ಕೊರತೆ ಇದೆ. ಈ ಮಾನ್ಸೂನ್ ಸಾಮಾನ್ಯವಾಗಿಲ್ಲ, ಶೇ, 28 ರಷ್ಟು ಮಳೆ ಕೊರತೆಯಾಗಿದೆ. ಹೀಗಾಗಿ ನೀರು ಬಿಡಲು ಆಗುವುದಿಲ್ಲ ಎಂದು ವಾದ ಮಂಡಿಸಿದ್ದಾರೆ.

ಇನ್ನೂ ಎರಡೂ ರಾಜ್ಯಗಳ ವಾದ-ಪ್ರತಿವಾದ ಆಲಿಸಿದ CWRC, ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ