ಯುಪಿಎ ಸರ್ಕಾರದಿಂದ ಲಾಭ ಪಡೆದ ಉದ್ಯಮಿಗಳ ಹೆಸರು ಬಹಿರಂಗಪಡಿಸಿದ ಬಿಜೆಪಿ

ಶುಕ್ರವಾರ, 23 ಡಿಸೆಂಬರ್ 2016 (13:01 IST)
ಯುಪಿಎ ಸರಕಾರದ ಅವಧಿಯಲ್ಲಿ ದೇಶದ ಖ್ಯಾತ ಕೈಗಾರಿಕೋದ್ಯಮಿಗಳಾದ ಗೌತಮ್ ಆದಾನಿ, ಅನಿಲ್ ಅಂಬಾನಿ, ವಿಜಯ್ ಮಲ್ಯ ಮತ್ತು ಸುನೀಲ್ ಮಿತ್ತಲ್ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಹೆಚ್ಚಿನ ಲಾಭ ಪಡೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ, ಸಹರಾ ಮತ್ತು ಬಿರ್ಲಾ ಕಂಪೆನಿಗಳಿಂದ ಕೋಟಿ ಕೋಟಿ ಹಣ ಪಡೆದಿದ್ದಾರೆ ಎನ್ನುವ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ.
 
ಯುಪಿಎ ಸರಕಾರವನ್ನು ಬೆಂಬಲಿಸಿದ ಕೈಗಾರಿಕೋದ್ಯಮಿಗಳಿಂದ 36.5 ಲಕ್ಷ ಕೋಟಿ ರೂಪಾಯಿಗಳ ಬಾಕಿಯನ್ನು ವಸೂಲಿ ಮಾಡಲು ಮೋದಿ ಸರಕಾರ ಕ್ರಮಕೈಗೊಂಡಿದೆ ಎಂದು ಬಿಜೆಪಿ ಹೇಳಿಕೆ ನೀಡಿದೆ.
 
ಗುರುವಾರದಂದು ವಾರಣಾಸಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಹೆಸರನ್ನು ಪ್ರಸ್ತಾಪಿಸದೆ ಯುವನಾಯಕ ಭಾಷಣ ಮಾಡುವುದನ್ನು ಕಲಿಯುತ್ತಿದ್ದಾರೆ ಎಂದು ಲೇವಡಿ ಮಾಡಿದ್ದರು.
 
ಪ್ರಧಾನಿ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಸಹರಾ ಮತ್ತು ಬಿರ್ಲಾ ಸಂಸ್ಥೆಗಳಿಂದ ಒಂಬತ್ತು ಬಾರಿ ಕೋಟಿ ಕೋಟಿ ಹಣ ಸ್ವೀಕರಿಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ