ಇಂದು 71ನೇ ಗಣರಾಜ್ಯೋತ್ಸವದ ಹಿನ್ನಲೆ; ದೆಹಲಿಯ ಸುತ್ತಮುತ್ತ ಬಿಗಿ ಭದ್ರತೆ
ಭಾನುವಾರ, 26 ಜನವರಿ 2020 (08:44 IST)
ನವದೆಹಲಿ : ಇಂದು 71ನೇ ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ರಾಷ್ಟ ರಾಜಧಾನಿ ದೆಹಲಿಯಲ್ಲಿ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈ ಬಾರಿ ಗಣತಂತ್ರಕ್ಕೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೊ ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಆರಂಭವಾಗಲಿದ್ದು, ಬಳಿಕ ಭಾರತೀಯ ಸೇನೆಯಲ್ಲಿ ವಿಶಿಷ್ಠ ಸಾಧನೆ ಮಾಡಿದವರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಪದಕಗಳನ್ನು ನೀಡಲಿದ್ದಾರೆ. ನಂತರ 90 ನಿಮಿಷಗಳ ಕಾಲ ಪರೇಡ್ ನಡೆಯಲಿದೆ.
ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ದೆಹಲಿಯ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ದೆಹಲಿಯಲ್ಲಿ ಒಟ್ಟು 22 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಒಟ್ಟು 150 ಉನ್ನತ ಮಟ್ಟದ ಸಿಸಿಟಿವಿ ಗಳನ್ನು ಅಳವಡಿಸಲಾಗಿದೆ. ದೆಹಲಿಯ ಮೆಟ್ರೋ, ರೈಲು, ವಿಮಾನ ನಿಲ್ದಾಣಗಳಲ್ಲಿ ಎಚ್ಚರಿಕೆ ವಹಿಸಲಾಗಿದೆ.