ದೆಹಲಿಯಲ್ಲಿ ಇಂದು ರಾಜ್ಯ ಸಂಸದರ ಸಭೆ; ಮೇಕೆದಾಟು ಮತ್ತು ಮಹದಾಯಿ ಯೋಜನೆ ಕುರಿತು ಚರ್ಚೆ

ಗುರುವಾರ, 20 ಡಿಸೆಂಬರ್ 2018 (12:51 IST)
ದೆಹಲಿ : ದೆಹಲಿಯಲ್ಲಿ ಇಂದು ಯೋಜನೆಗಳ ಕುರಿತು ಚರ್ಚೆ ನಡೆಸಲು ರಾಜ್ಯ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ನಾಯಕರ ಸಭೆ ಕರೆಯಲಾಗಿದೆ.

ದೆಹಲಿಯ ತ್ಯಾಗರಾಜ ರಸ್ತೆಯಲ್ಲಿರುವ ಸದಾನಂದಗೌಡರ ನಿವಾಸದಲ್ಲಿ ರಾಜ್ಯ ಸಂಸದರ ಸಭೆ ಕರೆದಿದ್ದು, ಮೇಕೆದಾಟು ಮತ್ತು ಮಹದಾಯಿ ಯೋಜನೆ ಕುರಿತು ಚರ್ಚೆ ನಡೆಸಲಾಗುವುದು. 

 

ಈ ಸಭೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್, ಸದಾನಂದ ಗೌಡ, ಮಲ್ಲಿಕಾರ್ಜುನ ಖರ್ಗೆ, ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮುದ್ದಹನುಮೇಗೌಡ, ವಿ.ಎಸ್.ಉಗ್ರಪ್ಪ, ರಮೇಶ್ ಜಿಗಜಿಣಗಿ, ಅನಂತ್ ಕುಮಾರ್ ಹೆಗಡೆ, ನಳಿನ್ ಕುಮಾರ್ ಕಟೀಲ್, ರಾಜೀವ್ ಚಂದ್ರಶೇಖರ್, ಡಿ.ಕೆ.ಸುರೇಶ್, ಆರ್ ಧ್ರುವ ನಾರಾಯಣ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

 

 ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ