ಗುಂಡಿನ ದಾಳಿಗೆ ಒಡಿಶಾದ ಆರೋಗ್ಯ ಸಚಿವ ಸಾವು!
ಭಾನುವಾರ ಜಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ದಾಸ್ ಮೇಲೆ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬ ಗುಂಡು ಹಾರಿಸಿದ್ದ.
ತಕ್ಷಣವೇ ಅವರನ್ನು ವಿಮಾನದಲ್ಲಿ ಭುವನೇಶ್ವರಕ್ಕೆ ಚಿಕಿತ್ಸೆಗೆಂದು ಏರ್ ಲಿಫ್ಟ್ ಮಾಡಲಾಗಿತ್ತು. ಅವರ ಎದೆಯ ಭಾಗಕ್ಕೆ ಬುಲೆಟ್ ತಗುಲಿದ್ದರಿಂದ ತೀವ್ರವಾಗಿ ಗಾಯವಾಗಿತ್ತು. ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.