ವಾಟ್ಸಪ್‌ನಲ್ಲಿ ಮೋದಿ ಆಕ್ಷೇಪಾರ್ಹ ಚಿತ್ರ ಬಳಕೆ: ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಬುಧವಾರ, 30 ನವೆಂಬರ್ 2016 (15:39 IST)
ವಾಟ್ಸಪ್‌ ಗ್ರೂಪ್‌ಗಳಲ್ಲಿ ಪ್ರಧಾನಿ ಮೋದಿಯ ಆಕ್ಷೇಪಾರ್ಹ ಚಿತ್ರಗಳನ್ನು ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಕಾಲೇಜೊಂದರ ವ್ಯವಸ್ಥಾಪಕ ಮತ್ತು ಪಂಚಾಯಿತಿ ವಿಭಾಗದ ಅಧಿಕಾರಿಯೊಬ್ಬರನ್ನು ಅಮಾನತ್ತುಗೊಳಿಸಲಾಗಿದೆ.
 
ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಯಾದ ಹಿಫಾಜತ್ ಉಲ್ಲಾಹ್ ಖಾನ್ ಪ್ರಧಾನಿ ಮೋದಿಯ ಆಕ್ಷೇಪಾರ್ಹ ಚಿತ್ರಗಳನ್ನು ವಾಟ್ಸಪ್‌ ಮೂಲಕ ಇತರರಿಗೆ ಕಳುಹಿಸಿದ್ದನು. ಇದರಿಂದ ಹಿರಿಯ ಅಧಿಕಾರಿಗಳು ಹಿಫಾಜತ್ ಖಾನ್‌ಗೆ ಶೋಕಾಸ್ ನೋಟಿಸ್ ನೀಡಿದ್ದರು. ಆದರೆ, ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಉದ್ಯೋಗದಿಂದ ಅಮಾನತ್ತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
 
ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ, ಪ್ರಧಾನಿ ಮೋದಿಯ ಆಕ್ಷೇಪಾರ್ಹ ಚಿತ್ರಗಳನ್ನು ವಾಟ್ಸಪ್ ಮೂಲಕ ಹಂಚಿಕೊಂಡಿದ್ದರಿಂದ ಕಾಲೇಜೊಂದರ ವ್ಯವಸ್ಥಾಪಕ ಹರಿಓಂ ಸಿಂಗ್‌ನನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
 
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಸಿಂಗ್ ನೀಡಿದ ದೂರಿನ ಮೇರೆಗೆ ಹರಿಓಂ ಸಿಂಗ್ ವಿರುದ್ಧ ಫರೀದ್‌ಪುರ್ ಕೋತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ