ಮಧ್ಯಪ್ರದೇಶ : ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಹೆಣ್ಣು ನಾಯಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದ 54 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ವ್ಯಕ್ತಿ ತಾನು ಸಾಕಿದ್ದ ಹೆಣ್ಣು ನಾಯಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಹಿನ್ನಲೆಯಲ್ಲಿ ಪೀಪಲ್ ಫಾರ್ ಅನಿಮಲ್ಸ್ ಕಾರ್ಯಕರ್ತರು ಈ ಬಗ್ಗೆ ಪೊಲೀಸರ ಗಮನಕ್ಕೆ ತಂದು ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.