ಬೂಸ್ಟರ್ ಡೋಸ್ ಪಡೆದವರಲ್ಲೂ ಓಮಿಕ್ರಾನ್ ಪತ್ತೆ!

ಶುಕ್ರವಾರ, 10 ಡಿಸೆಂಬರ್ 2021 (18:57 IST)
ಸಿಂಗಾಪುರ : ಕೋವಿಡ್ ಮೂರನೇ ಅಲೆ ಭೀತಿ ಶುರುವಾಗಿರುವ ಹೊತ್ತಿನಲ್ಲೇ ಬೂಸ್ಟರ್ ಡೋಸ್ ಬಗ್ಗೆಯೂ ಭರವಸೆಯ ಮಾತುಗಳು ವ್ಯಕ್ತವಾಗಿದೆ.

ಕೋವಿಡ್ ಲಸಿಕೆ ಪಡೆದವರಲ್ಲಿ ಮತ್ತಷ್ಟು ರೋಗನಿರೋಧಕ ಶಕ್ತಿ ಹೆಚ್ಚಿಸಲು ಬೂಸ್ಟರ್ ಡೋಸ್ ಸಹಕಾರಿಯಾಗಲಿದೆ ಎಂದು ಅಧ್ಯಯನಗಳು ಪ್ರತಿಪಾದಿಸಿವೆ. ಆದರೆ ಬೂಸ್ಟರ್ ಡೋಸ್ ಪಡೆದವರಲ್ಲೂ ಓಮಿಕ್ರಾನ್ ಸೋಂಕು ಪತ್ತೆಯಾಗಿರುವುದು ಆತಂಕ ಹೆಚ್ಚಿಸಿದೆ.

ಹೌದು, ಕೋವಿಡ್-19 ಬೂಸ್ಟರ್ ಪಡೆದಿದ್ದರೂ ಸಿಂಗಾಪುರದ ಇಬ್ಬರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. ವಿಮಾನ ಪ್ರಯಾಣಿಕರ ಸೇವಾ ಕಾರ್ಯಕರ್ತೆಯಾಗಿ ಕೆಲಸ ನಿರ್ವಹಿಸುತ್ತಿರುವ 24 ವರ್ಷದ ಮಹಿಳೆಗೆ ಓಮಿಕ್ರಾನ್ ದೃಢಪಟ್ಟಿದೆ.

ಸ್ಥಳೀಯವಾಗಿ ಪತ್ತೆಯಾದ ಮೊದಲ ಪ್ರಕರಣ ಇದಾಗಿದೆ. ಮತ್ತೊಬ್ಬ ಜರ್ಮನಿಯಿಂದ ಸಿಂಗಾಪುರಕ್ಕೆ ಆಗಮಿಸಿದ್ದ. ಇಬ್ಬರೂ ಬೂಸ್ಟರ್ ಡೋಸ್ ಪಡೆದುಕೊಂಡಿದ್ದರು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ