ಮೇ.30 ರಂದು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ

ಸೋಮವಾರ, 27 ಮೇ 2019 (07:23 IST)
ನವದೆಹಲಿ : 2019 ರ ಲೋಕಸಭಾ ಚುನಾವಣೆಯ ಪ್ರಚಂಡ ಗೆಲುವು ಸಾಧಿಸಿರುವ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ಮುಹೂರ್ತ ಫಿಕ್ಸ್ ಆಗಿದೆ.




ಹೌದು. ಮೇ.30 ರಂದು ನರೇಂದ್ರ ಮೋದಿ ಅವರು  ಪ್ರಧಾನಿಯಾಗಿ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಅಂದು ರಾತ್ರಿ 7 ಗಂಟೆಗೆ ಪದಗ್ರಹಣ ಸಮಾರಂಭ ನಡೆಯಲಿದೆ. ಅಂದು ನಡೆಯುವ ಸಮಾರಂಭದಲ್ಲಿ ಮೋದಿ ಸಚಿವನ್ನು ಸೇರಲಿರುವ ಕೆಲವು ಮಂದಿ ಕೇಂದ್ರ, ರಾಜ್ಯ ಸಚಿವರಾಗಿ ಪ್ರಮಾಣ ವಚನವನ್ನು ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.


ಇನ್ನು ಪ್ರಧಾನಿ ಮೋದಿಯವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಈ ಬಾರಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಸೇರಿ  ವಿಶ್ವದ ಕೆಲವು ರಾಷ್ಟ್ರಗಳ ನಾಯಕರನ್ನು ಆಹ್ವಾನಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ