ಜಿಮ್ ನಲ್ಲಿ ಮ್ಯೂಸಿಕ್ ಗಾಗಿ ಜಗಳ, ಕೊಲೆಯಲ್ಲಿ ಅಂತ್ಯ
ದೆಹಲಿಯ ಜಿಮ್ ಒಂದರಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಜೋರಾಗಿ ಮ್ಯೂಸಿಕ್ ಹಾಕಿದ್ದನ್ನು ಒಂದು ಗುಂಪು ಪ್ರಶ್ನಿಸಿದೆ. ಈ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ.
ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಜಗಳವಾಗಿದ್ದು, ಓರ್ವನ ತಲೆಗೆ ತೀವ್ರ ಗಾಯವಾಗಿದೆ. ಆಸ್ಪತ್ರೆಗೆ ದಾಖಲಿಸಿದರೂ ಈತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.