ಇಲ್ಲಿನ ಮೊಹಲದಲ್ಲಿ ಉಗ್ರರು ಅವಿತಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ಖಚಿತ ಸುಳಿವು ಲಭಿಸಿದ ತಕ್ಷಣ ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಶೋಧ ಕಾರ್ಯ ನಡೆಯುತ್ತಿದ್ದಾಗ ಅವಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ 9 ಸೈನಿಕರು ಗಾಯಗೊಂಡಿದ್ದು, ಮೂವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಸೈನ್ಯದ ಮೂಲಗಳು ತಿಳಿಸಿವೆ.