ಮುಂಬೈ: ಅಡುಗೆ ಮನೆಯಲ್ಲಿ ದಿನನಿತ್ಯ ಬಳಕೆಯಾಗುವ ಈರುಳ್ಳಿ ಮತ್ತೆ ಕಣ್ಣೀರು ತರಿಸುವ ಲಕ್ಷಣ ಕಾಣಿಸುತ್ತಿದೆ. ಈರುಳ್ಳಿ ಬೆಲೆ ಗಗನಕ್ಕೇರುತ್ತಿದೆ.
ಆಗಸ್ಟ್ ತಿಂಗಳಲ್ಲಿ ಈರುಳ್ಳಿ ಬೆಲೆ 80 ರೂ.ವರೆಗೆ ತಲುಪಿತ್ತು. ಅತಿ ವೃಷ್ಟಿಯಿಂದಾಗಿ ಈರುಳ್ಳಿ ಬೆಳೆ ಹಾನಿಯಾಗಿದ್ದಕ್ಕೆ ಈ ಬೆಲೆ ಏರಿಕೆಯಾಗಿತ್ತು. ಇದೀಗ ಈರುಳ್ಳಿ ಬೆಳೆಯುವ ಪ್ರಮುಖ ಪ್ರದೇಶವಾದ ಮತ್ತೆ ಮಹಾರಾಷ್ಟ್ರದಲ್ಲಿ ವಿಪರೀತ ಮಳೆಯಾಗಿ ಬೆಳೆ ಹಾನಿಯಾಗಿದೆ.
ಹೀಗಾಗಿ ಮತ್ತೆ ಕೆಲವು ರಾಜ್ಯಗಳಲ್ಲಿ ಬೆಲೆ ಕೆ.ಜಿಗೆ 80 ರಿಂದ 100 ಕ್ಕೆ ತಲುಪುತ್ತಿದೆ. ಇದು ರಾಜ್ಯಕ್ಕೂ ಪರಿಣಾಮ ಬೀರುವ ಸಾಧ‍್ಯತೆಯಿದೆ. ಹೀಗಾಗಿ ಈಗಲೇ ಈರುಳ್ಳಿ ಖರೀದಿಸಿಟ್ಟುಕೊಳ್ಳುವುದು ಉತ್ತಮ.