ಆನ್ಲೈನ್ ಗೇಮಿಂಗ್ ನಿಷೇಧ!?

ಸೋಮವಾರ, 14 ಫೆಬ್ರವರಿ 2022 (13:23 IST)
ಬೆಂಗಳೂರು : ಆನ್ಲೈನ್ ಗೇಮಿಂಗ್ ನಿಷೇಧಿಸಿದ ಸರ್ಕಾರ ಹೊರಡಿಸಿದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಆನ್ಲೈನ್ ಗೇಮಿಂಗ್ ನಿಷೇಧದ ಬಗ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ರಿತುರಾಜ್ ಅವಸ್ಥಿ ಮತ್ತು ನ್ಯಾ.ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಮಹತ್ವದ ತೀರ್ಪು ನೀಡಿದೆ. 

ಸರ್ಕಾರದ ಕ್ರಮ ಸಂವಿಧಾನಬದ್ಧವಾಗಿಲ್ಲ. ಆನ್ಲೈನ್ ಗೇಮಿಂಗ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಸಂವಿಧಾನಬದ್ಧವಾದ ಶಾಸನ ರೂಪಿಸಲು ಸರ್ಕಾರ ಸ್ವತಂತ್ರವಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶದಲ್ಲಿ ತಿಳಿಸಿದೆ.

ಈ ತಿದ್ದುಪಡಿ ವಿಧೇಯಕ ಲಾಟರಿ, ಕುದುರೆ ರೇಸ್ಗೆ ಅನ್ವಯವಾಗಿರಲಿಲ್ಲ. ಉಳಿದಂತೆ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಇನ್ನಿತರ ಆನ್ಲೈನ್ ಜೂಜಾಟ, ಬೆಟ್ಟಿಂಗ್ಗಳಿಗೆ ಅನ್ವಯವಾಗಿತ್ತು.

ಅಲ್ಲದೆ ಆನ್ಲೈನ್ ಗ್ಯಾಂಬ್ಲಿಂಗ್ ತೊಡಗುವವರಿಗೆ ಸಹಾಯ ಮಾಡುವವರಿಗೆ ಹಾಗೂ ಆಶ್ರಯ ನೀಡುವವರಿಗೂ 6 ತಿಂಗಳು ಜೈಲುಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸುವ ಅವಕಾಶ ಕಾನೂನಿನಲ್ಲಿತ್ತು. ಇದೀಗ ಹೈಕೋರ್ಟ್ ಆದೇಶವನ್ನು ರದ್ದು ಪಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ