Operation Sindoor: ಪಾಕ್‌ ಸೇನೆ ಅಪ್ರಚೋದಿತ ಗುಂಡಿನ ದಾಳಿ: 15 ಮಂದಿ ನಾಗಕರಿಕರು ಸಾವು

Sampriya

ಬುಧವಾರ, 7 ಮೇ 2025 (22:12 IST)
Photo Courtesy X
ಶ್ರೀನಗರ: ಭಾರತೀಯ ಸೇನೆ ನಡೆಸಿದ ಆಪರೇಷನ್‌ ಸಿಂಧೂರ ಬೆನ್ನಲ್ಲೇ ಪಾಕಿಸ್ಥಾನ ಸೇನೆ ಭಾರತದ ನಾಗರಿಕರ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.  ಪಾಕಿಸ್ತಾನ ಎಲ್‌ಒಸಿಯಲ್ಲಿ ಶೆಲ್ ದಾಳಿ ನಡೆಸಿ 15 ನಾಗರಿಕರನ್ನು ಬಲಿ ತೆಗೆದುಕೊಂಡಿದೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ತಂಗ್ಧರ್‌ನಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ 15 ನಾಗರಿಕರು ಸಾವನ್ನಪ್ಪಿದ್ದು, 43 ಜನ ಗಾಯಗೊಂಡಿದ್ದಾರೆ.

ಕಳೆದ ರಾತ್ರಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ತಾಣಗಳನ್ನು ಗುರಿಯಾಗಿರಿಸಿಕೊಂಡು ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿದೆ.‌ ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ.

ಏಪ್ರಿಲ್‌ 22ರಂದು ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲೆ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಅನೇಕ ಕ್ರಮಗಳನ್ನು ಕೈಗೊಂಡಿತ್ತು. ಮಂಗಳವಾರ ತಡರಾತ್ರಿ 1:45ರ ಸುಮಾರಿಗೆ ಭಾರತೀಯ ಸೇನೆ ಆಪರೇಷನ್ ಸಿಂಧೂರ ಹೆಸರಲ್ಲಿ ಪ್ರಮುಖ ಉಗ್ರರ ತಾಣಗಳನ್ನು ಗುರಿಯಾಗಿಸಿ ಏರ್‌ಸ್ಟ್ರೈಕ್ ನಡೆಸಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ