Operation Sindoor: ಸಿಂಧೂರ ಕಸಿದವನು ತನ್ನ ಕುಟುಂಬ ಕಳೆದುಕೊಂಡಿದ್ದಾನೆ ಎಂದ ಯೋಗಿ ಆದಿತ್ಯನಾಥ್‌

Sampriya

ಬುಧವಾರ, 7 ಮೇ 2025 (22:23 IST)
Photo Courtesy X
ಲಖನೌ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಿಒಕೆಯ ಉಗ್ರರ ಅಡಗು ತಾಣಗಳ ಮೇಲೆ ಭಾರತೀಯ ಸೇನಾ ಪಡೆ ನಡೆಸಿದ ದಾಳಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕ್‌ ಮತ್ತು ಪಿಒಕೆಯ ಉಗ್ರರ ಅಡಗು ತಾಣಗಳ ಮೇಲೆ ಭಾರತೀಯ ಸೇನಾ ಪಡೆ ನಡೆಸಿದ ದಾಳಿಗೆ ಯೋಗಿ ಆದಿತ್ಯನಾಥ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಪರೇಷನ್‌ ಸಿಂಧೂರ ನಡೆಸಿದ್ದಕ್ಕೆ ಪ್ರಧಾನಿ ಮೋದಿ ಮತ್ತು ಭಾರತೀಯ ಮೂರು ಸೇನಾ ಪಡೆಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.  

ನಮ್ಮ ಸಹೋದರಿಯರ ಗಂಡಂದಿರನ್ನು ಕೊಂದವರು, ಈಗ ಭಾರತದ ಕ್ಷಿಪಣಿ ದಾಳಿಯಲ್ಲಿ ತಮ್ಮ ಇಡೀ ಕುಟುಂಬವನ್ನು ಕಳೆದುಕೊಂಡಿದ್ದಾರೆ ಎಂದು ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಭಾರತ ನಡೆಸಿದ ದಾಳಿಯಲ್ಲಿ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಎಂಬಾತ ಕುಟುಂಬದ 10 ಮಂದಿ ಹತರಾಗಿದ್ಧಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ತಮ್ಮ ಗಂಡಂದಿರನ್ನು ಕಳೆದುಕೊಂಡ ನಮ್ಮ ಸಹೋದರಿಯರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ನಮ್ಮ ಭದ್ರತಾ ಪಡೆಗಳ ಭಾವನೆ ಏನೆಂಬುದು ಈ ಕಾರ್ಯಾಚರಣೆಯಿಂದ ಗೊತ್ತಾಗಿದೆ. ನಮ್ಮ ಸಹೋದರಿಯರು ಮತ್ತು ತಾಯಂದಿರ ಗಂಡಂದಿರನ್ನು ಕೊಲ್ಲಲು ಧೈರ್ಯ ಮಾಡಿದವರು ಈಗ ಕ್ಷಿಪಣಿ ದಾಳಿಯಲ್ಲಿ ತಮ್ಮ ಇಡೀ ಕುಟುಂಬವನ್ನು ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ