Operation Sindoor: ದೇಶದ ಸೈನಿಕರ ಶ್ರೇಯಸ್ಸಿಗಾಗಿ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆಗೆ ಜಮೀರ್ ಅಹ್ಮದ್‌ ಸಂದೇಶ

Sampriya

ಗುರುವಾರ, 8 ಮೇ 2025 (15:53 IST)
ಬೆಂಗಳೂರು: ದೇಶಕ್ಕಾಗಿ ಪ್ರಾಣ ಕೊಡಲು ಸಿದ್ದ ಎಂದು ಸುದ್ದಿಯಾಗಿದ್ದ ಸಚಿವ ಜಮೀರ್ ಅಹ್ಮದ್ ಇದೀಗ ಆಪರೇಷನ್ ಸಿಂಧೂರ ಕಾರ್ಯಚರಣೆ ಹಿನ್ನೆಲೆ ಸೇನೆಯ ಹೆಸರಿನಲ್ಲಿ ಶುಕ್ರವಾರದಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ್ದಾರೆ.

 ರಾಜ್ಯದ ಎಲ್ಲ  ಕರ್ನಾಟಕದ ಮುಜರಾಯಿ ಇಲಾಖಾ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆದೇಶ ಹೊರಡಿಸಿದ ಬೆನ್ನಲ್ಲೇ ಜಮೀರ್ ಅಹ್ಮದ್‌ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.   

ಆಪರೇಷನ್ ಸಿಂಧೂರದ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚನೆ ನೀಡಿದ್ದಾರೆ. ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲು ಧಾರ್ಮಿಕ ‌ದತ್ತಿ‌ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್ & ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಂದೇಶ ರವಾನಿಸಿದ್ದಾರೆ.

ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ ಬಿ ಝಡ್ ಜಮೀರ್ ಅಹ್ಮದ್ ಅವರು ವಕ್ಫ್ ಬೋರ್ಡ್ ಸಿಇಒಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.

ಪಹಲ್ಗಾಮ್​ನಲ್ಲಿ ಉಗ್ರರ ದಾಳಿ ಹಿನ್ನೆಲೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತದ ಸೈನಿಕರ ಶ್ರೇಯಸ್ಸು ಮತ್ತು ಶಕ್ತಿ ತುಂಬಲು ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ