ವಿಕಾಸ್ ದುಬೆ ಎನ್ ಕೌಂಟರ್ ಬಗ್ಗೆ ವಿರೋಧ ಪಕ್ಷದವರಿಂದ ಆರೋಪ

ಶನಿವಾರ, 11 ಜುಲೈ 2020 (08:38 IST)
Normal 0 false false false EN-US X-NONE X-NONE

ನವದೆಹಲಿ : ಉತ್ತರ ಪ್ರದೇಶದ ಗ್ಯಾಂಗ್ ಸ್ಟಾರ್ ವಿಕಾಸ್ ದುಬೆ ಎನ್ ಕೌಂಟರ್ ಆದ ಬಗ್ಗೆ ವಿರೋಧ ಪಕ್ಷದವರು ಬಿಜೆಪಿ ಸರ್ಕಾರದ ಬಗ್ಗೆ ಆರೋಪಗಳನ್ನು ಮಾಡುತ್ತಿದ್ದಾರೆ.

ಪೊಲೀಸರ ಹತ್ಯೆಗೆ ಕಾರಣನಾದ ಗ್ಯಾಂಗ್ ಸ್ಟಾರ್ ವಿಕಾಸ್ ದುಬೆಯನ್ನು ಕಾನ್ಪುರಕ್ಕೆ ಕರೆತರುವ ವೇಳೆ ಪೊಲೀಸರ ಮೇಲೆ ಮತ್ತೆ ದಾಳಿಗೆ ಯತ್ನಿಸಿದ ಹಿನ್ನಲೆಯಲ್ಲಿ ಎನ್ ಕೌಂಟರ್ ಮಾಡಲಾಗಿತ್ತು. ಈ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್, ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವರು ಬಿಜೆಪಿ ಸರ್ಕಾರದ ನಡೆಯ ಬಗ್ಗೆ ಆರೋಪಗಳನ್ನು ಮಾಡಿದ್ದಾರೆ.

ವಿಕಾಸ್ ದುಬೆಗೆ ರಾಜಕೀಯ ನಾಯಕರ ರಕ್ಷಣೆ ನೀಡಿದ್ದು, ಈ ಬಗ್ಗೆ ತನಿಖೆಯಾಗಬೇಕೆಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಆಗ್ರಹಿಸಿದ್ದಾರೆ. ಹಾಗೇ ರಹಸ್ಯ ಬಯಲಾದರೆ ಸರ್ಕಾರ ಪತನವಾಗುತ್ತದೆ ಎಂದು ಎನ್ ಕೌಂಟರ್ ಮಾಡಲಾಗಿದೆ ಎಂದು ಮಾಜಿ ಸಿಎಂ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಎನ್ ಕೌಂಟರ್ ಬಗ್ಗೆ ಬಿಜೆಪಿ ಸರ್ಕಾರದ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ