ಪ್ರಧಾನಿ ಮೋದಿ ಕ್ಷಮೆ ಕೋರುವವರೆಗೆ ಕಲಾಪ ನಡೆಯೋಲ್ಲ: ವಿಪಕ್ಷಗಳು

ಸೋಮವಾರ, 28 ನವೆಂಬರ್ 2016 (15:21 IST)
ದೇಶಾದ್ಯಂತ ವಿಪಕ್ಷಗಳು ಜನ್ ಆಕ್ರೋಶ ದಿವಸ್ ಆಚರಿಸುತ್ತಿರುವ ಸಂದರ್ಭದಲ್ಲಿ ಸಂಸತ್ತಿನಲ್ಲಿ ಸಭೆ ಸೇರಿದ ವಿಪಕ್ಷಗಳ ಮುಖಂಡರು, ಪ್ರಧಾನಿ ಮೋದಿ ಕ್ಷಮೆ ಕೋರಬೇಕು ಮತ್ತು ನೋಟು ನಿಷೇಧ ಪ್ರಕರಣವನ್ನು ಜೆಪಿಸಿ ತನಿಖೆಗೆ ನೀಡುವವರೆಗೆ ಸಂಸತ್ ಕಲಾಪ ನಡೆಯಲು ಬಿಡುವುದಿಲ್ಲ ಎಂದು ಘೋಷಿಸಿವೆ.
 
ಜೆಡಿಯು ಹೊರತುಪಡಿಸಿ ಇತರ ವಿಪಕ್ಷಗಳ ಮುಖಂಡರು ರಾಜ್ಯಸಭೆಯ ವಿಪಕ್ಷ ನಾಯಕ ಗುಲಾಮ್ ನಬಿ ಆಜಾದ್ ಅವರ ಕೋಣೆಯಲ್ಲಿ ಸಭೆ ಸೇರಿ, ವಿಪಕ್ಷಗಳ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. 
 
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯನ್ನು ಭೇಟಿ ಮಾಡಿ ನೋಟು ನಿಷೇಧ ಕುರಿತಂತೆ ಕೇಂದ್ರ ಸರಕಾರದ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ವಿಪಕ್ಷಗಳು ಇಬ್ಬಾಗವಾಗಿ ತಮ್ಮದೇ ಆದ ರೀತಿಯಲ್ಲಿ ಹೋರಾಟ ನಡೆಸುತ್ತಿವೆ.   
 
ಮಮತಾ ಬ್ಯಾನರ್ಜಿಯವರೊಂದಿಗೆ ಆಮ್ ಆದ್ಮಿ ಪಾರ್ಟಿ, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಬಿಜೆಪಿ ಮೈತ್ರಿಕೂಟದ ಪಕ್ಷವಾದ ಶಿವಸೇನೆ ಕೂಡಾ ಕೈ ಜೋಡಿಸಿವೆ.
 
ಶಿವಸೇನೆ ನೋಟು ನಿಷೇಧವನ್ನು ಸ್ವಾಗತಿಸಿದ್ದರೂ ಅದನ್ನು ಜನಸಾಮಾನ್ಯರಿಗೆ ತೊಂದರೆ ಉಂಟಾಗುವ ರೀತಿಯಲ್ಲಿ ಜಾರಿಗೊಳಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ