ವಿರೋಧ ಪಕ್ಷಗಳು ತಮ್ಮದೇ ಅಭ್ಯರ್ಥಿಯನ್ನು ನಿಲ್ಲಿಸಲಿವೆ: ಆಜಾದ್
ಸೋಮವಾರ, 19 ಜೂನ್ 2017 (18:33 IST)
ರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳು ತಮ್ಮದೇ ಅಭ್ಯರ್ಥಿಯನ್ನು ನಿಲ್ಲಿಸಲಿವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.
ಎನ್‌ಡಿಎಯೇತರ ಪಕ್ಷಗಳೊಂದಿಗೆ ಚರ್ಚಿಸಿದ ನಂತರ ಅಂತಿಮವಾಗಿ ಒಮ್ಮತದ ಅಭ್ಯರ್ಥಿಯನ್ನು ನಿಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಯುಪಿಎ ಮೈತ್ರಿಕೂಟದ ಸಂಚಾಲಕಿ, ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ವಿಪಕ್ಷಗಳ ನಾಯಕರೊಂದಿಗೆ ದಿನಾಂಕ 21 ರಂದು ಚರ್ಚೆ ನಡೆಸಲಿದ್ದಾರೆ ಎಂದರು.
ಬಿಜೆಪಿ ಹೈಕಮಾಂಡ್ ಬಿಹಾರ್ ರಾಜ್ಯಪಾಲ ರಾಮಾನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ನಿರಾಕರಿಸಿದರು.
ಜುಲೈ 17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಯುಪಿಎ ಮತ್ತು ಎನ್‌ಡಿಎ ಮೈತ್ರಿಕೂಟದ ಸ್ಪರ್ಧಾ ಕಣವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.