ಪಿ. ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಗುರುವಾರ, 5 ಸೆಪ್ಟಂಬರ್ 2019 (12:54 IST)
ನವದೆಹಲಿ : ಇಡಿ ಬಂಧನದಿಂದ ರಕ್ಷಣೆ ಕೋರಿ ಪಿ ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.




ಐಎನ್​ಎಕ್ಸ್ ಮೀಡಿಯಾ ಅವ್ಯವಹಾರ ಪ್ರಕರಣದಲ್ಲಿ ಸಿಲುಕಿ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಇಡಿ ಬಂಧನದಿಂದ ರಕ್ಷಣೆ ಕೋರಿ ಸುಪ್ರೀಂ ಕೊರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತನಿಖೆಯ ಆರಂಭಿಕ ಹಂತಗಳಲ್ಲೇ ನಿರೀಕ್ಷಣಾ ಜಾಮೀನು ನೀಡಿದರೆ ತನಿಖೆಯ ಕಾರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಅಭಿಪ್ರಾಯ ಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.


ಅಲ್ಲದೇ ಪಿ ಚಿದಂಬರಂ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ಕೊಡುವಂತೆ ಜಾರಿ ನಿರ್ದೇಶನಾಲಯ ಮಾಡಿಕೊಂಡ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ಅಲ್ಲದೇ ಪಿ. ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯದಿಂದಲೂ ವಿಚಾರಣೆಗೊಳಪಡುವ ಸಾಧ್ಯತೆ ಹೆಚ್ಚಿದ್ದು, ಇದೀಗ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಯಾವಾಗ ಬೇಕಾದರೂ ಚಿದಂಬರಂ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬಹುದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ