ಪ್ರೀತಿ ನಿರಾಕರಿಸಿದ ಯುವತಿಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ

ಮಂಗಳವಾರ, 25 ಡಿಸೆಂಬರ್ 2018 (10:53 IST)
ಉತ್ತರಾಖಂಡ : ಹುಚ್ಚು ಪ್ರೇಮಿಯೊಬ್ಬ ಪ್ರೀತಿಸಲು ಒಲ್ಲೆ ಎಂದಿದ್ದಕ್ಕೆ ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಉತ್ತರಾಖಂಡ್ ನಲ್ಲಿ ನಡೆದಿದೆ.


ಮನೋಜ್ ಸಿಂಗ್ ಅಲಿಯಾಸ್ ಬಂಟಿ (31) ಕ್ಯಾಬ್ ಡ್ರೈವರ್ ಆಗಿದ್ದು, ಈತ 18 ವರ್ಷದ ಯುವತಿಯೊಬ್ಬಳನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದು, ಈ ವಿಚಾರವನ್ನು ಆಕೆಗೆ ತಿಳಿಸಿದಾಗ ಆಕೆ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಆತ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮನೋಜ್ ಸಿಂಗ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ವಿಚಾರ ಬಾಯ್ಬಿಟ್ಟಿದ್ದಾನೆ.    


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ