ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರು ಸಾವನ್ನಪ್ಪಿದ ಘಟನೆ ಕುರಿತು ಚರ್ಚಿಸಲು ವಿಶೇಷ ಸಂಸತ್ತಿನ ಅಧಿವೇಶನ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರಬರೆದು ಒತ್ತಾಯಿಸಿದ್ದಾರೆ.
ಸಂಸತ್ತಿನ ಎರಡೂ ಸದನಗಳ ವಿಶೇಷ ಅಧಿವೇಶನ ನಡೆಸಬೇಕೆಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಈ ಅಧಿವೇಶನವು ದಾಳಿಯ ಬಗ್ಗೆ ಜಂಟಿ ನಿಲುವನ್ನು ವ್ಯಕ್ತಪಡಿಸಲು ಮತ್ತು ಪರಿಸ್ಥಿತಿ ನಿಭಾಯಿಸಲು ಸಾಮೂಹಿಕ ಸಂಕಲ್ಪವನ್ನು ಪ್ರದರ್ಶಿಸಲು ಒಂದು ವೇದಿಕೆಯಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಪತ್ರದ ಪ್ರತಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸಾಮಾಜಿಕ ಮಾಧ್ಯಮ 'ಎಕ್ಸ್‌ನ'ಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಸರ್ಕಾರ ಏಪ್ರಿಲ್ 22 ರಂದು ವಿಶೇಷ ಅಧಿವೇಶನ ನಡೆಸಿದ್ದು, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದೆ. ಅಧಿವೇಶನದಲ್ಲಿ ಒಗ್ಗಟ್ಟು ಮತ್ತು ಏಕತೆಯನ್ನು ಪ್ರದರ್ಶಿಸಲಾಗಿದ್ದು, ನಿರ್ಣಯವನ್ನು ಅಂಗೀಕರಿಸಿದೆ.
ಜಮ್ಮು ಮತ್ತು ಕಾಶ್ಮೀರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಅವರು ಅಧಿವೇಶನದ ಆರಂಭದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸುವ ನಿರ್ಣಯವನ್ನು ಮಂಡಿಸಿದರು, ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರ ಆರಂಭಿಕ ಹೇಳಿಕೆಗಳ ನಂತರ. ಕೇಂದ್ರ ಸರ್ಕಾರ ಘೋಷಿಸಿದ ರಾಜತಾಂತ್ರಿಕ ಕ್ರಮಗಳನ್ನು ನಿರ್ಣಯವನ್ನು ಅನುಮೋದಿಸಲಾಯಿತು. ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ನಿರ್ಣಯವನ್ನು ಅಂಗೀಕರಿಸಲಾಯಿತು, ನಂತರ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಕುರಿತು ಚರ್ಚಿಸಲು ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.