Pahalgam Terror Attack: ಇನ್ಮುಂದೆ ಪಾಕ್‌ನ ಯೂಟ್ಯೂಬ್ ಚಾನೆಲ್‌ಗಳು ಭಾರತದಲ್ಲಿ ಓಪನ್ ಆಗಲ್ಲ, ಕ್ರಿಕೆಟಿಗನಿಗೂ ತಟ್ಟಿದ ಬಿಸಿ
ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಮುಗ್ದ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಬಳಿಕ ಭಾರತ ವಾಘಾ ಹಾಗೂ ಅಟ್ಟಾರಿ ಬಾರ್ಡರ್ ಅನ್ನು ಬಂದ್ ಮಾಡುವ ಮೂಲಕ ಪ್ರತ್ಯುತ್ತರವನ್ನು ನೀಡಲು ಶುರು ಮಾಡಿದೆ.
ಇದೀಗ ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ದುರಂತ ಪಹಲ್ಗಾಮ್ ಭಯೋತ್ಪಾದಕ ಘಟನೆಯ ಹಿನ್ನೆಲೆಯಲ್ಲಿ ಭಾರತ, ಅದರ ಸೇನೆ ಮತ್ತು ಭದ್ರತಾ ಏಜೆನ್ಸಿಗಳ ವಿರುದ್ಧ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ ವಿಷಯ, ಸುಳ್ಳು ಮತ್ತು ದಾರಿತಪ್ಪಿಸುವ ನಿರೂಪಣೆಗಳು ಮತ್ತು ತಪ್ಪು ಮಾಹಿತಿಗಳನ್ನು ಪ್ರಸಾರ ಮಾಡುವ ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ಭಾರತ ಸರ್ಕಾರ ನಿಷೇಧಿಸಿದೆ