ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಅನಂತ್‌ನಾಗ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ (ಜಿಎಂಸಿ) ಭೇಟಿ ನೀಡಿ, ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿ, ಧೈರ್ಯ ತುಂಬಿದರು.
2019ರ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಮಾರಣಾಂತಿಕ ದಾಳಿ ಇದಾಗಿದೆ.
ಇಂದು ಮುಂಜಾನೆ ಎಚ್‌ಎಂ ಅಮಿತ್ ಶಾ ದಾಳಿ ನಡೆದ ಬೈಸರನ್ ಹುಲ್ಲುಗಾವಲಿನ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರು. ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ಆಗಮಿಸಿದ ಕೇಂದ್ರ ಸಚಿವರು ಮೊದಲು ಪ್ರದೇಶದ ವೈಮಾನಿಕ ಅವಲೋಕನ ನಡೆಸಿದರು.
ಗಾಯಗೊಂಡವರನ್ನು ಭೇಟಿಯಾಗಿ ಕೆಲಹೊತ್ತು ಮಾತುಕತೆ ನಡೆಸಿದರು. ಅದಲ್ಲದೆ ವೈದ್ಯರ ಜತೆ ಚರ್ಚೆ ನಡೆಸಿ, ಆರೋಗ್ಯವನ್ನು ವಿಚಾರಿಸಿದರು.