ಕಾಶ್ಮಿರ ಹಿಂಸಾಚಾರಕ್ಕೆ ಪಾಕ್ ಪ್ರಚೋದನೆ: ರಾಜನಾಥ್ ಸಿಂಗ್

ಗುರುವಾರ, 21 ಜುಲೈ 2016 (15:12 IST)
ಕಾಶ್ಮಿರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಪಾಕಿಸ್ತಾನ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪ್ರಚೋದನೆ ನೀಡುತ್ತಿದೆ. ಆದರೆ, ಪರಿಸ್ಥಿತಿ ಸುಧಾರಣೆಗಾಗಿ ಸರಕಾರ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
 
ಕಾಶ್ಮಿರ ವಿಷಯ ಕುರಿತಂತೆ ಲೋಕಸಭೆಯಲ್ಲಿ ಮಾತನಾಡಿದ ಸಿಂಗ್, ಪಾಕಿಸ್ತಾನ ತನ್ನ ದೇಶದಲ್ಲಿರುವ ಅಂತರಿಕ ಸಮಸ್ಯೆಗಳನ್ನು ಪರಿಹರಿಸುವ ಬದಲು ಭಾರತವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಪಾಕಿಸ್ತಾನ ಭಯೋತ್ಪಾದನೆಗೆ ಪ್ರಾಯೋಜಿಸುತ್ತಿರುವುದರಿಂದ ಭಾರತದಲ್ಲಿ ಭಯೋತ್ಪಾದನೆ ಚಟುವಟಿಕೆಗಳಿಗೆ ಪ್ರೋತ್ಸಾಹ ದೊರೆಯುತ್ತಿದೆ. ಧರ್ಮದ ಹೆಸರಲ್ಲಿ ಕಾಶ್ಮಿರ ಕಣಿವೆಯಲ್ಲಿ ಪರಿಸ್ಥಿತಿಯನ್ನು ಹದಗೆಡಿಸಲು ಪಾಕ್ ಪ್ರಯತ್ನಿಸುತ್ತಿದೆ ಎಂದರು
 
ಧರ್ಮದ ಹೆಸರಲ್ಲಿ ಭಾರತದಿಂದ ಪ್ರತ್ಯೇಕವಾದ ಪಾಕಿಸ್ತಾನ, ಇದೀಗ ಭಯೋತ್ಪಾದನೆಯಿಂದಾಗಿ ಪಾಕಿಸ್ತಾನ ಎರಡು ಭಾಗಗಳಾಗಿವೆ. ಪ್ರತಿನಿತ್ಯ ಭಯೋತ್ಪಾದನೆಯ ವಿರುದ್ಧ ಹೋರಾಟ ನಡೆಸುವಂತಹ ಅನಿವಾರ್ಯತೆ ಎದುರಾಗಿದೆ ಎಂದು ಲೇವಡಿ ಮಾಡಿದ್ದಾರೆ
 
ನಮ್ಮ ನೆರೆಯ ರಾಷ್ಟ್ರದ ಎಲ್ಲಾ ದುರುದ್ದೇಶಗಳು ಯಶಸ್ವಿಯಾಗಲು ನಾವು ಬಿಡುವುದಿಲ್ಲ ಎಂದು ಘೋಷಿಸಿದರು.
 
ಹಿಜ್ಬುಲ್ ಮುಜಾಹಿದಿನ್ ಉಗ್ರ ಬುರ್ಹಾನ್ ವನಿಯ ಹತ್ಯೆಯ ದಿನವನ್ನು ಕರಾಳ ದಿನವನ್ನಾಗಿ ಆಚರಿಸುತ್ತಿರುವ ಪಾಕಿಸ್ತಾನದ ನಿರ್ಧಾರ ವಿಷಾದಕರ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ