24 ಗಂಟೆಯಲ್ಲಿ 3ನೇ ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್
ಜಮ್ಮು ಕಾಶ್ಮೀರ: ಪಾಕ್ ಪಡೆ ಮತ್ತೆ ಭಾರತದ ಮೇಲೆ ಅಪ್ರಚೋದಿತ ದಾಳಿ ನಡೆಸಿವೆ. ಪೂಂಚ್ ಜಿಲ್ಲೆಯ ಕೃಷ್ಣಘಾಟಿ ಸೆಕ್ಟರ್ ನಲ್ಲಿ ಪಾಕ್ ಪಡೆ ಭಾರತದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿವೆ.
ನಿನ್ನೆ ಸಹ ಪಾಕ್ ಕದನ ವಿರಾಮ ಉಲ್ಲಂಘಿಸಿದ್ದು, ಎಲ್ ಜಿ ಸೆಕ್ಟರ್ ಬಳಿ ಗುಂಡಿನ ದಾಳಿ ನಡೆಸಿದೆ. ಈ ದಾಳಿಯಲ್ಲಿ ಓರ್ವ ಸ್ಥಳೀಯ ನಿವಾಸಿ ಮತ್ತು ಯೋಧ ವೀರ ಮರಣವನ್ನಪ್ಪಿದ್ದಾರೆ. ಈ ವರ್ಷದಲ್ಲಿ ಪಾಕ್ ಉಪಟಳ ತೀವ್ರ ಹೆಚ್ಚಳವಾಗಿದ್ದು ಕದನ ವಿರಾಮ ಉಲ್ಲಂಘಿಸಿ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.