ಪ್ರಧಾನಿ ಮೋದಿಯನ್ನು ಭೇಟಿಯಾದ ಮಾಜಿ ಸಿಎಂ ಪನ್ನೀರ್‌ಸೆಲ್ವಂ

ಶನಿವಾರ, 20 ಮೇ 2017 (12:33 IST)
ಎಐಎಡಿಎಂಕೆ ಮುಖಂಡ ಮಾಜಿ ಮುಖ್ಯಮಂತ್ರಿ ಓ. ಪನ್ನೀರ್ ಸೆಲ್ವಂ ಇಂದು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ತಮಿಳುನಾಡಿನ ರಾಜ್ಯ ರಾಜಕೀಯ ಸ್ಥಿತಿಗತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ.
 
ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ನಿಧನದ ನಂತರ ಎಐಎಡಿಎಂಕೆ ಪಕ್ಷ ಇಬ್ಬಾಗವಾಗಿದ್ದು, ಎರಡು ಬಣಗಳು ಒಂದಾಗುವುದು ಸೂಕ್ತ ಎಂದು ಪ್ರಧಾನಿ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾಗಿ ಸೆಲ್ವಂ ತಿಳಿಸಿದ್ದಾರೆ.
 
ಕಾವೇರಿ ನದಿ ನೀರು ಪ್ರಾಧಿಕಾರ, ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಆರ್ಥಿಕ ಪರಿಹಾರ, ಬರ ಪರಿಹಾರ ಕಾರ್ಯಕ್ಕಾಗಿ ಹಣಕಾಸಿನ ನೆರವು ಮತ್ತು ಜಲ ಯೋಜನೆಗಳಿಗೆ ತುರ್ತು ನೆರವು ನೀಡುವಂತೆ ಮಾಜಿ ಸಿಎಂ ಪನ್ನೀರ್ ಸೆಲ್ವಂ ಪ್ರಧಾನಿ ಮೋದಿಗೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ