ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಇಂದಿನಿಂದ ಆರಂಭವಾಗಲಿದ್ದು, ಆರ್ಥಿಕ ಹಿಂಜರಿತ, ಅಯೋಧ್ಯೆ ತೀರ್ಪು, ಜಮ್ಮು ಕಾಶ್ಮೀರ ಸ್ಥಿತಿಗತಿ ವಿಚಾರವಾಗಿ ವಿಪಕ್ಷಗಳು ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ.
ನಿನ್ನೆಯೇ ಪ್ರಧಾನಿ ಮೋದಿ ಸರ್ವಪಕ್ಷಗಳ ಸಭೆ ಕರೆದಿದ್ದು ಸುಗಮ ಕಲಾಪ ನಡೆಸಲು ಎಲ್ಲರ ಸಹಕಾರ ಕೋರಿದ್ದಾರೆ. ಹಾಗಿದ್ದರೂ ವಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದು ನಿಶ್ಚಿತವಾಗಿದೆ.
ಅದರಲ್ಲೂ ವಿಶೇಷವಾಗಿ ಆರ್ಥಿಕ ಹಿಂಜರಿತವೇ ವಿಪಕ್ಷಗಳ ಪ್ರಮುಖ ಅಸ್ತ್ರವಾಗುವ ನಿರೀಕ್ಷೆಯಿದೆ. ಸರ್ವಪಕ್ಷಗಳ ಸಭೆಯಲ್ಲಿಯೇ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಈ ಬಗ್ಗೆ ಸುಳಿವು ನೀಡಿದ್ದಾರೆ.