ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜಯಭೇರಿ ಖಚಿತ: ಪರಿಕ್ಕರ್
ಶುಕ್ರವಾರ, 8 ಜುಲೈ 2016 (15:44 IST)
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೇಕರ್ ನೇತೃತ್ವದ ಬಿಜೆಪಿ ಸರಕಾರ ಭರ್ಜರಿ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ರಕ್ಷಣಾ ಖಾತೆ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಗೋವಾದಲ್ಲಿ ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯಮಂತ್ರಿ ಪರ್ಸೇಕರ್ ಹೊಣೆಯಾಗಿದೆ ಎಂದು ತಿಳಿಸಿದ್ದಾರೆ
ಕಳೆದ 200ರಲ್ಲಿ ಗೋವಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಪರ್ಸೇಕರ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರೂ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲು ಆಸಕ್ತಿ ತೋರಿರಲಿಲ್ಲ. ಕೇವಲ ಜನಸೇವೆಯತ್ತ ಗಮನಹರಿಸಿದ್ದರು ಎಂದು ಶ್ಲಾಘಿಸಿದರು.
2012ರಲ್ಲಿ ಬಿಜೆಪಿ ಮತ್ತೆ ಗೋವಾದಲ್ಲಿ ಅಧಿಕಾರಕ್ಕೆ ಬಂದಾಗ ಪರ್ಸೇಕರ್ ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದರು ಎನ್ನುವುದು ಮರೆಯುವಂತಿಲ್ಲ ಎಂದರು.
ಶೀಘ್ರದಲ್ಲಿ ರಾಜ್ಯ ರಾಜಕೀಯಕ್ಕೆ ಬರುವ ಯಾವುದೇ ಸುಳಿವನ್ನು ನೀಡದಿರುವ ಪರಿಕ್ಕರ್, ನಾನು ದೆಹಲಿಯಲ್ಲಿ ಸಚಿವನಾಗಿ ಕಾರ್ಯನಿರ್ವಹಿಸುತ್ತೇನೆ. ಆದರೆ, ರಾಜಕೀಯವಾಗಿ ನಾನು ಗೋವಾ ನಾಗರಿಕನಾಗಿರುತ್ತೇನೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.