ರಾಜಕೀಯ ಭಿನ್ನಾಭಿಪ್ರಾಯವಿಲ್ಲದೆ ಬಜೆಟ್ನಲ್ಲಿ ಭಾಗವಹಿಸಿ: ಮೋದಿ!

ಸೋಮವಾರ, 31 ಜನವರಿ 2022 (14:19 IST)
ನವದೆಹಲಿ : ಬಜೆಟ್ ಅಧಿವೇಶನದ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಭಿನ್ನಾಭಿಪ್ರಾಯವನ್ನು ಬದಿಗಿಟ್ಟು ಎಲ್ಲಾ ಪಕ್ಷಗಳ ಬೆಂಬಲ ಮತ್ತು ಭಾಗವಹಿಸುವಿಕೆಯನ್ನು ನಿರೀಕ್ಷಿಸಿದ್ದಾರೆ.
 
ಐದು ರಾಜ್ಯಗಳಲ್ಲಿ ಚುನಾವಣಾ ಪ್ರಚಾರದ ಹೊರತಾಗಿಯೂ, ದೇಶದ ಪ್ರಗತಿಯನ್ನು ವೇಗಗೊಳಿಸಲು ಮತ್ತು ಹೊಸ ಆರ್ಥಿಕ ಗುರಿಗಳನ್ನು ಸಾಧಿಸಲು ಸಂಸದರು ಗಂಭೀರ ಚರ್ಚೆಗಳಲ್ಲಿ ಭಾಗವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಂಸತ್ತಿನ ಹೊರಗೆ ಮಾತನಾಡಿದ ಪ್ರಧಾನಿ ಮೋದಿ ಆಗಾಗ್ಗೆ ಚುನಾವಣೆಗಳು ಸಂಸತ್ತಿನ ಕಲಾಪಗಳು ಮತ್ತು ಸದನದ ಚರ್ಚೆಗಳ ಮೇಲೆ ಪರಿಣಾಮ ಬೀರುತ್ತವೆ ಎಂದು  ಹೇಳಿದ್ದಾರೆ. "ಆದರೆ ನಾನು ಎಲ್ಲಾ ಸಂಸದರು ಮತ್ತು ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಗಳು ಮತ್ತು ಚುನಾವಣಾ ಸಂಬಂಧಿತ ಭಿನ್ನಾಭಿಪ್ರಾಯಗಳನ್ನು ಬದಿಗಿಡಲು ವಿನಂತಿಸುತ್ತೇನೆ.

ಕೇಂದ್ರ ಬಜೆಟ್ನ ಪ್ರಾಮುಖ್ಯತೆಯು ನಮ್ಮ ಭಿನ್ನಾಭಿಪ್ರಾಯಗಳನ್ನು ಮೀರಿದೆ. ಮುಂಬರುವ ಬಜೆಟ್ ಅಧಿವೇಶನವು ಇಡೀ ಮುಂಬರುವ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಇದನ್ನು ಯಶಸ್ವಿಗೊಳಿಸಬೇಕು’ ಎಂದು ಪ್ರಧಾನಿ ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ