ಪಠಾನ್‌ಕೋಟ್ ದಾಳಿಯಿಂದ ಭಾರತ-ಪಾಕ್ ಮಾತುಕತೆಗೆ ವಿಘ್ನ: ನವಾಜ್ ಷರೀಫ್

ಶನಿವಾರ, 30 ಜನವರಿ 2016 (16:19 IST)
ಪಠಾನ್‌ಕೋಟ್ ಉಗ್ರರ ದಾಳಿಯಿಂದ ಭಾರತ ಮತ್ತು ಪಾಕಿಸ್ತಾನದ ದ್ವಿಪಕ್ಷೀಯ ಮಾತುಕತೆಯ ಮೇಲೆ ಪ್ರಭಾವ ಬೀರಿದೆ ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ನವಾಜ್ ಷರೀಫ್ ಒಪ್ಪಿಕೊಂಡಿದ್ದಾರೆ. 
 
ಪಠಾನ್‌ಕೋಟ್ ದಾಳಿಯಿಂದಾಗಿ ನೆರೆಹೊರೆಯ ಎರಡು ರಾಷ್ಟ್ರಗಳ ಶಾಂತಿ ಮಾತುಕತೆ ಪ್ರಕ್ರಿಯೆ ನಿಧಾನಗತಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.
 
ಭಾರತ ಸರಕಾರ, ಪಠಾನ್‌ಕೋಟ್ ವಾಯುನೆಲೆಯ ಮೇಲೆ ನಡೆದ ಜೈಷ್-ಎ-ಮೊಹಮ್ಮದ್ ಉಗ್ರರ ಕುರಿತಂತೆ ನಿರ್ಧಿಷ್ಠವಾದ ಮತ್ತು ಕಾರ್ಯಾಚರಣೆ ಕೈಗೊಳ್ಳವಂತಹ ಮಾಹಿತಿಯನ್ನು ಪಾಕಿಸ್ತಾನಕ್ಕೆ ನೀಡಿದೆ ಎಂದು ಸ್ಪಷ್ಟಪಡಿಸಿದರು.
 
ಜೈಷ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಪಠಾನ್‌ಕೋಟ್ ದಾಳಿಯ ರೂವಾರಿಯಾಗಿದ್ದಾನೆ ಎಂದು ಭಾರತ, ಪಾಕಿಸ್ತಾನಕ್ಕೆ ಸಂಪೂರ್ಣ ಮಾಹಿತಿ ನೀಡಿದೆ.
 
ಉಗ್ರಗಾಮಿ ಸಂಘಟನೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆಯೇ ಮತ್ತು ಸಂಘಟನೆಯ ಕಾರ್ಯಕರ್ತರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎನ್ನುವ ಬಗ್ಗೆ ಪಾಕಿಸ್ತಾನ, ಭಾರತ ಸರಕಾರಕ್ಕೆ ಮಾಹಿತಿ ನೀಡಬೇಕಾಗಿದೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ