ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಾಟ್ನಾ ಹೈಕೋರ್ಟ್ ನ್ಯಾಯಾಧೀಶರು!

ಶನಿವಾರ, 25 ಫೆಬ್ರವರಿ 2023 (13:32 IST)
ನವದೆಹಲಿ : ತಮ್ಮ ಜನರಲ್ ಪ್ರಾವಿಡೆಂಟ್ ಫಂಡ್ ಖಾತೆಗಳನ್ನು ಮುಚ್ಚಲಾಗಿದೆ ಎಂದು ಆರೋಪಿಸಿ ಪಾಟ್ನಾ ಹೈಕೋರ್ಟ್ನ ಏಳು ಮಂದಿ ನ್ಯಾಯಾಧೀಶರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. 

ಈ ವಿಷಯವನ್ನು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ. ಶೀಘ್ರದಲ್ಲಿ ಮಾಹಿತಿ ನೀಡಲಿದ್ದೇವೆ ಎಂದು ಪ್ರಕರಣದ ಬಗ್ಗೆ ಹೆಚ್ಚುವರಿ ಸಾಲಿಸಿಟರ್ ಜನರಲ್, ಸಿಜೆಐ ಪೀಠದ ಮುಂದೆ ಹೇಳಿದ್ದಾರೆ. ಮುಂದಿನ ವಿಚಾರಣೆ ವೇಳೆ ಪ್ರಕರಣದ ಸ್ಥಿತಿಗತಿಯನ್ನು ತಿಳಿಸಲು ಎಎಸ್ಜಿಗೆ ನ್ಯಾಯಾಲಯವು ಸೂಚಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ