‘ಗೋ ಫಸ್ಟ್’ ವಿಮಾನಯಾನ ಸಂಸ್ಥೆಗೆ ದಂಡ!

ಶನಿವಾರ, 28 ಜನವರಿ 2023 (05:32 IST)
ನವದೆಹಲಿ : ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋಗಿದ್ದಕ್ಕಾಗಿ ‘ಗೋ ಫಸ್ಟ್’ ವಿಮಾನಯಾನ ಸಂಸ್ಥೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು 10 ಲಕ್ಷ ರೂ. ದಂಡವನ್ನು ವಿಧಿಸಿದೆ.
 
ಈ ಅಚಾತುರ್ಯ ಸಂಭವಿಸಿದ ಬೆನ್ನಲ್ಲೇ ಗೋ ಫಸ್ಟ್ಗೆ ಡಿಜಿಸಿಎ ನೋಟಿಸ್ ನೀಡಿತ್ತು. “ಸಂವಹನ, ಸಮನ್ವಯದ ಕೊರತೆ ಮತ್ತು ದೃಢಪಡಿಸಿಕೊಳ್ಳುವಲ್ಲಿ ಆಗಿರುವ ತಪ್ಪುಗಳಿಂದ ಈ ಲೋಪ ಸಂಭವಿಸಿದೆ.

ಈ ನಿರ್ಲಕ್ಷ್ಯಕ್ಕೆ ತಮ್ಮ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಬಾರದು” ಎಂದು ‘ಗೋ ಫಸ್ಟ್’ನ ಅಕೌಂಟೆಬಲ್ ಮ್ಯಾನೇಜರ್/ ಚೀಫ್ ಆಪರೇಷನ್ ಆಫೀಸರ್ಗೆ ಡಿಜಿಸಿಎ ನೋಟಿಸ್ ನೀಡಿತ್ತು. ನೋಟಿಸ್ಗೆ ಉತ್ತರಿಸಲು ಎರಡು ವಾರಗಳ ಕಾಲಾವಕಾಶವನ್ನು ನೀಡಿತ್ತು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ