ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಮೇಘ ಸ್ಫೋಟ ಸಂಭವಿಸಿದೆ. ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಳಿ ಸೇರಿದಂತೆ ಹಲವೆಡೆ ಭೂಕುಸಿತ, ಮಣ್ಣು ಕುಸಿತ ಸಂಭವಿಸಿದೆ. ಹೀಗಾಗಿ ಹೆದ್ದಾರಿಯಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ.
ರಂಬನ್‌ನ ಸೆರಿ ಬಗ್ನಾ ಗ್ರಾಮದಲ್ಲಿ ಮೇಘ ಸ್ಫೋಟ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ನೂರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ 50ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. 15ಕ್ಕೂ ಮನೆಗಳು ಸಂಪೂರ್ಣವಾಗಿ ನಾಶವಾಗಿದೆ, ಹಲವು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.