ಭೋಪಾಲ್ : ಮಹಿಳೆಯರು ಮತ್ತು ಯುವತಿಯರ ಮುಂದೆ ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಖಾಸಗಿ ಅಂಗಕ್ಕೆ ಊರಿನ ಜನ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಈ ಪ್ರಕರಣ ಸಂಬಂಧ ಪೆಟ್ರೋಲ್ ಹಚ್ಚಿದ ಇಬ್ಬರನ್ನು ಬಂಧಿಸಲಾಗಿದ್ದು, ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಕಜ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಪ್ರತಿನಿತ್ಯ ಮಹಿಳೆಯರು ಮತ್ತು ಯುವತಿಯರ ಮುಂದೆ ವ್ಯಕ್ತಿಯೋರ್ವ ತನ್ನ ಖಾಸಗಿ ಅಂಗವನ್ನು ತೋರಿಸುವ ಮೂಲಕ ಅಶ್ಲೀಲವಾಗಿ ವರ್ತಿಸುತ್ತಿದ್ದನು. ಈ ಕುರಿತಂತೆ ಗ್ರಾಮಸ್ಥರು ಸಾಕಷ್ಟು ಬಾರೀ ಆತನಿಗೆ ಎಚ್ಚರಿಕೆ ನೀಡಿದ್ದಾರೆ.
ಹೀಗಿದ್ದರೂ ಶನಿವಾರ ಗ್ರಾಮದ ಮಹಿಳೆಯರ ಮುಂದೆ ತನ್ನ ಚಾಳಿಯನ್ನು ಮುಂದುವರೆಸಿದ್ದಕ್ಕೆ ಆತನಿಗೆ ಇಬ್ಬರು ವ್ಯಕ್ತಿಗಳು ಹಿಗ್ಗಾಮುಗ್ಗ ಥಳಿಸಿದ್ದಾರೆ. ನಂತರ ಆತನ ಖಾಸಗಿ ಅಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.