ಅಮೆಜಾನ್, ಫ್ಲಿಪ್ ಕಾರ್ಟ್ ನಂತಹ ಕಂಪೆನಿಗಳಲ್ಲಿ ಗೃಹ ಬಳಕೆಯ ವಸ್ತುಗಳ ಮಾರಾಟಕ್ಕೆ ಅನುಮತಿ

ಶುಕ್ರವಾರ, 17 ಏಪ್ರಿಲ್ 2020 (07:00 IST)

ನವದೆಹಲಿ : ಏಫ್ರಿಲ್ 20ರಿಂದ  ಅಮೆಜಾನ್, ಫ್ಲಿಪ್ ಕಾರ್ಟ್ ಹಾಗೂ ಸ್ನ್ಯಾಪ್ ಡೀಲ್ ಕಂಪೆನಿಗಳಲ್ಲಿ ಅಗತ್ಯ ವಸ್ತುಗಳ ಜೊತೆಗೆ ಗೃಹ ಬಳಕೆಯ ವಸ್ತುಗಳನ್ನು ಮಾರಾಟ ಮಾಡಲು  ಕೇಂದ್ರ ಸರ್ಕಾರ ಅನುಮತಿ ನೀಡಿದೆ.

 

ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಬಿಡುಗಡೆ ಮಾಡಿದ ಮಾರ್ಗಸೂಚಿಯಲ್ಲಿ ಅಮೆಜಾನ್, ಫ್ಲಿಪ್ ಕಾರ್ಟ್ ಹಾಗೂ ಸ್ನ್ಯಾಪ್ ಡೀಲ್ ಕಂಪೆನಿಗಳಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿ ಕೇಂದ್ರ ಗೃಹ ಸಚಿವಾಲಯ ಎಲೆಕ್ಟ್ರಾನಿಕ್ ವಸ್ತುಗಳ ಮಾರಾಟ ಮಾಡಬಹುದಾಗಿ ತಿಳಿಸಿದೆ. ಆದರೆ ಕಂಪೆನಿಗಳ ಡೆಲಿವರಿ ವಾಹನಗಳು ಆಯಾ ರಾಜ್ಯ ಸರ್ಕಾರದ ಅನುಮತಿ ಪಡೆದು ರೋಡಿಗಳಿಸಬೇಕು ಎಂದು ತಿಳಿಸಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ