ಪೂಜೆ ಮಾಡಲು ಅನುಮತಿ ನೀಡುವಂತೆ ಕೋರಿ ಅರ್ಜಿ

ಶನಿವಾರ, 16 ಜುಲೈ 2022 (06:21 IST)
ಲಕ್ನೋ : ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ವಿವಾದಿತ ಜ್ಞಾನವಾಪಿ ಮಸೀದಿ ಆವರಣದಲ್ಲಿ ಇತ್ತೀಚೆಗೆ ಶಿವಲಿಂಗ ಪತ್ತೆಯಾಗಿದ್ದು,

ಅಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಅನುಮತಿ ನೀಡುವಂತೆ ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದೆ.

ವರದಿಗಳ ಪ್ರಕಾರ, ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ಸ್ಥಳದ ಅಧ್ಯಕ್ಷ ರಾಜೇಶ್ ಮಣಿ ತ್ರಿಪಾಠಿ ಅವರು ಅರ್ಜಿ ಸಲ್ಲಿಸಿದ್ದಾರೆ. ಶ್ರಾವಣ ಮಾಸ ಪ್ರಾರಂಭವಾಗುತ್ತಿರುವುದರಿಂದ ಹಿಂದೂಗಳಿಗೆ ಪೂಜೆ ಸಲ್ಲಿಸಲು ಹಾಗೂ ತಮ್ಮ ಹಕ್ಕನ್ನು ಚಲಾಯಿಸಲು ಅವಕಾಶ ನೀಡಬೇಕು ಎಂದು ವಾದಿಸಿದ್ದಾರೆ. 

ಭಾರತ ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಜನರು ತಮ್ಮದೇ ಆದ ಧಾರ್ಮಿಕ ಆಚರಣೆಗಳನ್ನು ನಡೆಸುವ ಹಕ್ಕಿದೆ. ಶ್ರಾವಣ ಮಾಸದಲ್ಲಿ ಶಿವನಿಗೆ ಪೂಜೆ ಮಾಡುವ ಪದ್ಧತಿಯಿರುವುದು ನಿಜ.

ಹೀಗಾಗಿ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಶ್ರಾವಣ ಮಾಸದಲ್ಲಿ ಪ್ರಾರ್ಥನೆ, ಪೂಜೆ ನಡೆಸಲು ಹಿಂದೂಗಳಿಗೆ ಅನುಮತಿ ನೀಡಬೇಕಾಗಿ ತ್ರಿಪಾಠಿ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ