ಸುಪ್ರೀಂ ಕೋರ್ಟ್‌ಗೆ ಅರ್ಜಿ

ಭಾನುವಾರ, 10 ಅಕ್ಟೋಬರ್ 2021 (13:55 IST)
ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹತ್ಯೆ ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.

ದೆಹಲಿ ಮೂಲದ ವಕೀಲರೊಬ್ಬರು ಈ ಅರ್ಜಿ ಸಲ್ಲಿಸಿದ್ದು, “ಹಿಂದೂಗಳು ಮತ್ತು ಸಿಖ್ಖರನ್ನು ಟಾರ್ಗೆಟ್ ಮಾಡಿ ಕೊಲ್ಲಲಾಗುತ್ತಿದ್ದು, ಅಲ್ಲಿರುವ ಅಲ್ಪಸಂಖ್ಯಾತರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಹತ್ಯೆಗೀಡಾದವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.
5 ದಿನಗಳಲ್ಲಿ 7 ಮಂದಿ ನಾಗರಿಕರನ್ನು ಕೊಲ್ಲಲಾಗಿದೆ. ಇದು ಅಲ್ಲಿರುವ ಅಲ್ಪಸಂಖ್ಯಾತರಲ್ಲಿ ಅಭದ್ರತೆ ಮತ್ತು ಭಯ ಮೂಡಿಸಿದೆ. ಈಗ ನಡೆಯುತ್ತಿರುವ ಕೃತ್ಯಗಳು 21 ವರ್ಷಗಳ ಹಿಂದೆ ಅನಂತ್ನಾಗ್ನ ಛತ್ತೀಸಿಂಘ್ ಪೋರಾದಲ್ಲಿ ನಡೆದ 36 ಸಿಖ್ಖರ ನರಮೇಧವನ್ನು ನೆನಪಿಸುತ್ತಿದೆ ಎಂದೂ ವಕೀಲ ವಿನೀತ್ ಜಿಂದಾಲ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ