ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಪ್ರಮಾಣದ ಇಳಿಕೆ

ಶನಿವಾರ, 1 ಏಪ್ರಿಲ್ 2017 (08:20 IST)
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಪ್ರಮಾಣದ ಇಳಿಕೆಯಾಗಿದೆ. ಪೆಟ್ರೋಲ್ ಬೆಲೆಯಲ್ಲಿ ಪ್ರತೀ ಲೀಟರ್`ಗೆ 3.77 ರೂ. ಮತ್ತು ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 2.91 ರೂ. ಇಳಿಕೆಯಾಗಿದೆ. ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.
 

ಕಳೆದ ಎರಡೂವರೆ ತಿಂಗಳಲ್ಲಾದ ಮೊದಲ ಬೆಲೆ ಪರಿಷ್ಕರಣೆ ಇದಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಗಣನೀಯ ಇಳಿಕೆ ಮತ್ತು ಅಮೆರಿಕನ್ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯದ ಚೇತರಿಕೆ ಬೆಲೆ ಇಳಿಕೆಗೆ ಪ್ರಮುಖ ಕಾರಣ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಶನ್ ತಿಳಿಸಿದೆ.

ಜನವರಿ 16ರಂದು ಪೆಟ್ರೋಲ್ ಬೆಲೆಯಲ್ಲಿ 54 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ 1.20 ರೂ. ಏರಿಕೆ ಮಾಡಲಾಗಿತ್ತು.

ವೆಬ್ದುನಿಯಾವನ್ನು ಓದಿ