ಆ.14 ರಾತ್ರಿಯಿಂದ ಪೆಟ್ರೋಲ್ ಬೆಲೆ 3 ರು. ಇಳಿಕೆ

ಶನಿವಾರ, 14 ಆಗಸ್ಟ್ 2021 (08:34 IST)
ಚೆನ್ನೈ(ಆ.14): ಪೆಟ್ರೋಲ್ ಬೆಲೆ 100 ರು. ದಾಟಿದ ಈ ಹೊತ್ತಿನಲ್ಲಿ ಜನಸಾಮಾನ್ಯರಿಗೆ ಅನುಕೂಲ ಒದಗಿಸಲು ತಮಿಳುನಾಡು ಸರ್ಕಾರ, ಬೆಲೆಯನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಇದು ಆಗಸ್ಟ್ 14ರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಲೀಟರ್ಗೆ 3 ರು. ಕಡಿತ ಮಾಡುವುದಾಗಿ ಸರ್ಕಾರ ಪ್ರಕಟಿಸಿದೆ.

ಶುಕ್ರವಾರ ತಮ್ಮ ಚೊಚ್ಚಲ ಬಜೆಟ್ ಮಂಡನೆ ವೇಳೆ ಈ ವಿಷಯ ಪ್ರಕಟಿಸಿದ ವಿತ್ತ ಮಂತ್ರಿ ಪಳನಿವೇಲ್ ತಂಗರಾಜನ್, ‘ನಮಮ್ಮ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 3 ರು.ನಷ್ಟು ಕಡಿತಗೊಳಿಸಲಿದೆ. ಇದರಿಂದ ಪೆಟ್ರೋಲ್ ಬೆಲೆ ಲೀಟರ್ಗೆ 3 ರು. ಕಡಿಮೆಯಾಗಲಿದೆ. ಇದು ಕಾರ್ಮಿಕ ವರ್ಗಕ್ಕೆ ಹೆಚ್ಚಿನ ಅನುಕೂಲ ಒದಗಿಸಲಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕವಾಗಿ 1,160 ಕೋಟಿ ನಷ್ಟವಾಗಲಿದೆ’ ಎಂದು ವಿವರಿಸಿದರು.
ಅಧಿಕಾರಕ್ಕೆ ಬಂದರೆ ಪೆಟ್ರೋಲ್ ಬೆಲೆ ಕಡಿಮೆ ಮಾಡುವುದಾಗಿ ಡಿಎಂಕೆ ಹೇಳಿತ್ತು. ಈ ವರ್ಷದ ಏಪ್ರಿಲ್ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವು ಮುನ್ನಡೆ ಸಾಧಿಸಿದ ನಂತರ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ರ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರ ಮಂಡಿಸಿದ ಮೊದಲ ಬಜೆಟ್ ಇದಾಗಿದೆ.
ದೇಶಾದ್ಯಂತ ಇಂಧನ ಬೆಲೆಗಳು ಏರಿಕೆಯಾಗುತ್ತಿದ್ದು ಬಹುತೇಕ ರಾಜ್ಯಗಳಲ್ಲಿ ಪೆಟ್ರೋಲ್ ದರ 100 ರ ಗಡಿಯನ್ನು ದಾಟಿವೆ. ಸ್ಥಳೀಯ ತೆರಿಗೆಗಳಾದ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಸರಕು ಶುಲ್ಕಗಳ ಆಧಾರದ ಮೇಲೆ ಇಂಧನ ಬೆಲೆ ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ