2022ರಲ್ಲಿ ದೇಶದ ಪ್ರತಿಯೊಂದು ಗ್ರಾಮಕ್ಕೆ 24 ಗಂಟೆ ವಿದ್ಯುತ್ ಸೌಲಭ್ಯ: ಮೋದಿ

ಶುಕ್ರವಾರ, 4 ಸೆಪ್ಟಂಬರ್ 2015 (15:18 IST)
ಮುಂಬರುವ 2022 ವರ್ಷದ ವೇಳೆಗೆ ದೇಶದ ಪ್ರತಿಯೊಂದು ಗ್ರಾಮದಲ್ಲೂ 24 ಗಂಟೆಗಳ ವಿದ್ಯುತ್ ಸೌಲಭ್ಯ ದೊರೆಯಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
 
ಶಿಕ್ಷಕರ ದಿನಾಚರಣೆಯ ನಿಮಿತ್ಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾತನಾಡಿದ ಅವರು, ಭಾರತ ದೇಶ 75ನೇ ಸ್ವಾತಂತ್ರ್ಯ ಸಂಭ್ರಮಾಚರಣೆ ಆಚರಿಸುವ ಸಂದರ್ಭದಲ್ಲಿ ದೇಶದ ಪ್ರತಿಯೊಂದು ಗ್ರಾಮ 24 ಗಂಟೆಗಳ ಕಾಲ ವಿದ್ಯುತ್ ಸೌಲಭ್ಯ
 
ದೇಶದ ಒಂಬತ್ತು ರಾಜ್ಯಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಡಿಯೋ ಕಾನ್ಫ್‌ರೆನ್ಸ್ ಮೂಲಕ ಪ್ರಧಾನಿ ಮೋದಿಯವರಿಗೆ ಪ್ರಶ್ನೆ ಕೇಳಿದ್ದಾರೆ.
 
ದೇಶದ ಹಲವು ಭಾಗಗಳಲ್ಲಿ ವಿದ್ಯುತ್ ಸೌಲಭ್ಯವಿಲ್ಲದಿರುವಾಗ ಡಿಜಿಟಲ್ ಇಂಡಿಯಾ ಹೇಗೆ ತಾನೇ ಯಶಸ್ವಿಯಾಗಲು ಸಾಧ್ಯ ಎಂದು ಉತ್ತರಾಖಂಡ್ ರಾಜ್ಯದ ವಿದ್ಯಾರ್ಥಿ ಸಾರ್ಥಕ್ ಭಾರಧ್ವಾಜ್ ಪ್ರಧಾನಿ ಮೋದಿಯವರಿಗೆ ಪ್ರಶ್ನಿಸಿದರು. 
 
ದೇಶದ ಒಟ್ಟು 18 ಸಾವಿರ ಗ್ರಾಮಗಳಲ್ಲಿ ವಿದ್ಯುತ್ ಸೌಲಭ್ಯವಿಲ್ಲ. ಮುಂದಿನ 1000 ದಿನಗಳೊಳಗಾಗಿ 18 ಸಾವಿರ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಮೋದಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ