ಇಂದು ಮುಂಗಾರು ಅಧಿವೇಶನ ಆರಂಭವಾದ ಹಿನ್ನೆಲೆಯಲ್ಲಿ ಸಂಸತ್ತಿನ ಹೊರ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಕಳೆದ ಕೆಲ ದಿನಗಳಿಂದ ವಿಪಕ್ಷಗಳೊಂದಿಗೆ ಚರ್ಚೆ ನಡೆಸಿ ಸಹಮತಕ್ಕೆ ಬಂದಿದ್ದೇವೆ. ಆದ್ದರಿಂದ, ಅಧಿವೇಶನದಲ್ಲಿ ಉತ್ತಮ ನಿರ್ಧಾರಗಳನ್ನು ಕೈಗೊಂಡು ವೇಗವಾಗಿ ಅಭಿವೃದ್ಧಿಪಥದಲ್ಲಿ ಸಾಗಬೇಕಾಗಿದೆ ಎಂದರು.
ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿರುವವರನ್ನು ಸ್ಮರಿಸಿದ ಮೋದಿ, ಸಂಸತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಿ ಕಾರ್ಯನಿರ್ವಹಿಸಿ, 70 ವರ್ಷಗಳ ಸ್ವಾತಂತ್ರ್ಯದ ಅನುಭವಕ್ಕೆ ಹೊಸ ಮೆರಗು ನೀಡಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಏತನ್ಮಧ್ಯೆ, ಅರುಣಾಚಲ ಪ್ರದೇಶದಲ್ಲಿದ್ದ ಕಾಂಗ್ರೆಸ್ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು, ಕಾಶ್ಮಿರ ಬಿಕ್ಕಟ್ಟು, ಎನ್‌ಎಸ್‌ಜಿ ಸದಸ್ಯತ್ವ ಪಡೆಯುವಲ್ಲಿ ವಿಫಲತೆ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ.