ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ ಘೋಷಿಸಿದ ಮೋದಿ

Krishnaveni K

ಶುಕ್ರವಾರ, 15 ಆಗಸ್ಟ್ 2025 (09:24 IST)
Photo Credit: X
ನವದೆಹಲಿ: 79 ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಇಂದು ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ ಕೊಡುವುದಾಗಿ ಘೋಷಣೆ ಮಾಡಿದ್ದಾರೆ.

ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು ದೇಶದ ಜನತೆಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಈ ದೀಪಾವಳಿ ಸಂದರ್ಭದಲ್ಲಿ ಜನರಿಗೆ ವಿಶೇಷ ಉಡುಗೊರೆಯೊಂದನ್ನು ಕೊಡಲಿದ್ದೇವೆ. ಅದಕ್ಕಾಗಿ ಈಗಾಗಲೇ ತಯಾರಿ ನಡೆಸುತ್ತಿದ್ದೇವೆ ಎಂದಿದ್ದಾರೆ.

ಜಿಎಸ್ ಟಿ ಮೂಲಕ ನಾವು ದೇಶದ ಜನರಿಗೆ ತೆರಿಗೆಯ ಹೊರೆಯನ್ನು ಕಡಿಮೆ ಮಾಡಿದ್ದೇವೆ. ಇದೀಗ ಮತ್ತೊಮ್ಮೆ ಜಿಎಸ್ ಟಿ ನಿಯಮಗಳಲ್ಲಿ ಸುಧಾರಣೆ ಮಾಡಲಿದ್ದೇವೆ. ಇದಕ್ಕಾಗಿ ಈಗಾಗಲೇ ರಾಜ್ಯಗಳ ಜೊತೆ ನಾವು ಚರ್ಚೆ ನಡೆಸಿದ್ದೇವೆ.

ದೀಪಾವಳಿ ಸಂದರ್ಭದಲ್ಲಿ ಹೊಸ ಜಿಎಸ್ ಟಿ ನಿಯಮ ಘೋಷಣೆಯಾಗಲಿದೆ. ಇದರಿಂದ ದೇಶದ ಜನರಿಗೆ ಅದರಲ್ಲೂ ಮಧ್ಯಮ ವರ್ಗದವರಿಗೆ ಅಗತ್ಯ ವಸ್ತುಗಳ ಖರೀದಿಯಿಂದ ಆಗುವ ಹೊರೆ ಕಡಿಮೆಯಾಗಲಿದೆ. ಇದು ದೇಶದ ಜನರಿಗೆ ನಿಜಕ್ಕೂ ದೀಪಾವಳಿ ಉಡುಗೊರೆಯಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ