ವೈದ್ಯರ ನಿವೃತ್ತಿ ವಯಸ್ಸು 65ಕ್ಕೆ ಏರಿಸುವ ಪ್ರಸ್ತಾವಕ್ಕೆ ಪ್ರಧಾನಿ ಸಮ್ಮತಿ
ಬುಧವಾರ, 1 ಜೂನ್ 2016 (12:07 IST)
ದೇಶದ ಆರೋಗ್ಯ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದೊಂದಿಗೆ ಸರ್ಕಾರಿ ಸೇವೆಯಲ್ಲಿರುವ ವೈದ್ಯರ ನಿವೃತ್ತಿ ವಯಸ್ಸನ್ನು 65ಕ್ಕೆ ಏರಿಸಲು ಸಲ್ಲಿಸಿದ್ದ ಪ್ರಸ್ತಾವನೆಗೆ ಪ್ರಧಾನಿ ಮೋದಿ ಒಪ್ಪಿಗೆ ಸೂಚಿಸಿದ್ದಾರೆ.
ಈ ಆದೇಶ 31 ಮೇ, 2016ರಿಂದಲೇ ಜಾರಿಗೆ ಬಂದಿದ್ದು ಆರೋಗ್ಯ ಸಚಿವಾಲಯ ಇದನ್ನು ಸ್ಪಷ್ಟಪಡಿಸಿದೆ.
ಈ ನಡೆ ಅನುಭವಿ ವೈದ್ಯರಿಂದ ದೀರ್ಘ ಸೇವೆಯನ್ನು ಸಕ್ರಿಯಗೊಳಿಸಲು, ಜತೆಗೆ ಸಾರ್ವಜನಿಕ ಆರೋಗ್ಯ ಸೌಲಭ್ಯವನ್ನು ಅವಲಂಬಿಸಿರುವ ಬಡವರಿಗೆ ಉತ್ತಮ ಸೇವೆ ನೀಡಲು ಸರ್ಕಾರಕ್ಕೆ ಅನುಕೂಲಕರವಾಗಲಿದೆ ಎಂದು ಆರೋಗ್ಯ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಉತ್ತರ ಪ್ರದೇಶದ ಸಹಾರನ್ಪುರದಲ್ಲಿ ಇತ್ತೀಚಿಗೆ ನಡೆದಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ವೈದ್ಯರ ನಿವೃತ್ತಿ ವಯಸ್ಸನ್ನು 65ಕ್ಕೆ ಏರಿಕೆ ಮಾಡುವುದಾಗಿ ತಿಳಿಸಿದ್ದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ.