ಚಳಿಗಾಲದ ಅಧಿವೇಶನ ಕಲಾಪಕ್ಕೆ ಅಡ್ಡಿ ಬೇಡ: ವಿಪಕ್ಷಗಳಿಗೆ ಪ್ರಧಾನಿ ಮನವಿ

ಬುಧವಾರ, 25 ನವೆಂಬರ್ 2015 (20:58 IST)
ನಾಳೆ ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುವ ಮುನ್ನಾ ದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿಪಕ್ಷಗಳು ಸದನದ ಕಲಾಪಕ್ಕೆ ಅಡ್ಡಿಯಾಗದಂತೆ ಜನತೆಯ ನಿರೀಕ್ಷೆಯಂತೆ ಕಾರ್ಯನಿರ್ವಹಿಸಿ ಎಂದು ಸರ್ವಪಕ್ಷಗಳ ಸಭೆಯಲ್ಲಿ ಕರೆ ನೀಡಿದ್ದಾರೆ.
 
ಕೇಂದ್ರ ಸರಕಾರ ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಮಾತನಾಡಿದ ಮೋದಿ, ಅಮೀರ್ ಖಾನ್‌ರ ಅಸಹಿಷ್ಣುತೆ ಹೇಳಿಕೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಸರಕಾರ ಚರ್ಚಿಸಲು ಸಿದ್ದವಿದೆ. ಆದರೆ, ವಿಪಕ್ಷಗಳು ತಮ್ಮ ಜವಾಬ್ದಾರಿಯನ್ನು ಅರಿತು ನಡೆಯಲಿ ಎಂದು ಸಲಹೆ ನೀಡಿದ್ದಾರೆ. 
 
ಕೇಂದ್ರ ಸರಕಾರ ಚಳಿಗಾಲದ ಅಧಿವೇಶನದಲ್ಲಿ ಜಿಎಸ್‌ಟಿ ಮಸೂದೆ ಸೇರಿದಂತೆ ಇನ್ನಿತರ ಮಹತ್ವದ ಮಸೂದೆಗಳನ್ನು ಸದನದಲ್ಲಿ ಮಂಡಿಸಲು ನಿರ್ಧರಿಸಿದೆ.
 
ಜಿಎಸ್‌ಟಿ ಮಸೂದೆಯ ಬಗ್ಗೆ ಅನುಮಾನಗಳಿದ್ದಲ್ಲಿ ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ, ವಿಪಕ್ಷಗಳ ಅನುಮಾನಗಳನ್ನು ಬಗೆಹರಿಸಲು ಸಿದ್ದರಾಗಿದ್ದಾರೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. 
 

ವೆಬ್ದುನಿಯಾವನ್ನು ಓದಿ