ಪ್ರಧಾನಿ ಮೋದಿ ಬಾಂಗ್ಲಾದೇಶದ ಪ್ರವಾಸ ರದ್ದು

ಸೋಮವಾರ, 9 ಮಾರ್ಚ್ 2020 (11:01 IST)
ನವದೆಹಲಿ : ಕೊರೊನಾ ಭೀತಿ ಹಿನ್ನಲೆಯಲ್ಲಿ ಇಂದು ಪ್ರಧಾನಿ ಮೋದಿ ಬಾಂಗ್ಲಾದೇಶದ ಪ್ರವಾಸ ರದ್ದುಪಡಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಇಂದು ಪ್ರಧಾನಿ ಮೋದಿ ಅವರು ಬಾಂಗ್ಲಾದೇಶಕ್ಕೆ ತೆರಳಿ ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಬೇಕಿತ್ತು. ಹಾಗೇ ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಿತ್ತು.

 

ಆದರೆ ವಿಶ್ವದೆಲ್ಲೆಡೆ ಕೊರೊನಾ ವೈರಸ್ ಭೀತಿ ಇರುವ ಹಿನ್ನಲೆಯಲ್ಲಿ ಪ್ರಧಾನಿ  ಆರೋಗ್ಯದ ದೃಷ್ಟಿಯಿಂದ  ಬಾಂಗ್ಲಾದೇಶದ ಪ್ರವಾಸ ರದ್ದುಪಡಿಸಲಾಗಿದೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ