ಫ್ರಾನ್ಸ್ ಉಗ್ರರ ದಾಳಿ: ಪ್ರಧಾನಿ ನರೇಂದ್ರ ಮೋದಿ ತೀವ್ರ ಖಂಡನೆ

ಶುಕ್ರವಾರ, 15 ಜುಲೈ 2016 (16:27 IST)
ಫ್ರಾನ್ಸ್‌ ದೇಶದ ನೈಸ್ ನಗರದಲ್ಲಿ ನಡೆದ ಉಗ್ರರ ದಾಳಿಯನ್ನು ಪ್ರಧಾನಿ ಮೋದಿ ತೀವ್ರವಾಗಿ ಖಂಡಿಸಿ, ಇದೊಂದು ಹೇಡಿಗಳ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ನೈಸ್ ನಗರದಲ್ಲಿ ನಿನ್ನೆ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 10.30 ಗಂಟೆಯ ಸಂದರ್ಭದಲ್ಲಿ ಸಶಸ್ತ್ರಧಾರಿ ವ್ಯಕ್ತಿಯೊಬ್ಬಭಾರಿ ಗಾತ್ರದ ಟ್ರಕ್‌‌ನ್ನು ವೇಗವಾಗಿ ಚಲಾಯಿಸಿಕೊಂಡು ಬಾಸ್ಟಿಲ್ಲೆ ಡೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಜನಜಂಗುಳಿಯ ಮೇಲೆ ದಾಳಿ ಮಾಡಿದ ಘಟನೆಯಲ್ಲಿ 84 ಜನರು ಸಾವನ್ನಪ್ಪಿ ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
 
ಫ್ರಾನ್ಸ್ ಮೇಲೆ ನಡೆದ ಉಗ್ರರ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ. ಫ್ರಾನ್ಸ್ ಜನತೆಯ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ ಎಂದು ಹೇಳಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ ಮೃತರ ಕುಟುಂಬಗಳಿಗೆ ದೇವರು ದುಖಃವನ್ನು ತಡೆಯುವಂತಹ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
 
ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಭಾರತೀಯರು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ