‘ಆಸ್ಕರ್’ ವಿಜೇತರಿಗೆ ಅಭಿನಂದಿಸಿದ ಪ್ರಧಾನಿ ಮೋದಿ

ಸೋಮವಾರ, 13 ಮಾರ್ಚ್ 2023 (11:07 IST)
ಭಾರತದ ಎರಡು ಚಿತ್ರಗಳಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸಂದಿದೆ. ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡು ಅತ್ಯುತ್ತಮ ಓರಿಜನ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದ್ದರೆ,
 
ಡಾಕ್ಯುಮೆಂಟರಿ ವಿಭಾಗದಲ್ಲಿ ಕಾರ್ತಿಕಿ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಎರಡೂ ತಂಡಕ್ಕೂ ಪ್ರಧಾನಿ ನರೇಂದ್ರ ಮೋದಿ ಶುಭಾಶಯಗಳನ್ನು ಕೋರಿದ್ದಾರೆ. ಇದೊಂದು ಐತಿಹಾಸಿ ಕ್ಷಣ ಎಂದು ಬಣ್ಣಿಸಿದ್ದಾರೆ.

ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇಡೀ ಭಾರತ ಕುತೂಹಲದಿಂದ ವೀಕ್ಷಿಸುತ್ತಿತ್ತು. ಈ ಬಾರಿ ಭಾರತದ ಮೂರು ಸಿನಿಮಾಗಳು ನಾಮಿನೇಟ್ ಆಗಿ ಹಲವು ವಿಭಾಗಗಳ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದವು.

ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡು ಬೆಸ್ಟ್ ಓರಿಜನಲ್ ಸಾಂಗ್ ವಿಭಾಗದಲ್ಲಿ ಸ್ಪರ್ಧಿಸಿದ್ದರೆ, ಬೆಸ್ಟ್ ಡಾಕ್ಯುಮೆಂಟರಿ ವಿಭಾಗದಲ್ಲಿ ‘ಆಲ್ ದೆಟ್ ಬ್ರೆತ್ಸ್’ ಮತ್ತು ಬೆಸ್ಟ್ ಶಾರ್ಟ್ ಫಿಲ್ಮ್ ವಿಭಾಗದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್’ ಇತ್ತು. 

ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 5.30 ರಿಂದ ಪ್ರಶಸ್ತಿ ಪ್ರದಾನ ಸಮಾರಂಭ ಶುರುವಾಯಿತು. ಭಾರತಕ್ಕೆ ಮೊದಲ ಪ್ರಶಸ್ತಿಯು ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಡೆದುಕೊಳ್ಳುವ ಮೂಲಕ ಶುಭಾರಂಭ ಮಾಡಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ