ಸುಷ್ಮಾ ಸ್ವರಾಜ್ ಅವರ ಪಾರ್ಥಿವ ಶರೀರದ ಮುಂದೆ ಕಂಬನಿ ಮಿಡಿದ ಪ್ರಧಾನಿ ಮೋದಿ

ಬುಧವಾರ, 7 ಆಗಸ್ಟ್ 2019 (10:55 IST)
ನವದೆಹಲಿ : ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು  ನಿಧನರಾದ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರು  ಸುಷ್ಮಾ ಸ್ವರಾಜ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.
ಕಳೆದ ಬಾರಿ ಮೋದಿ ನೇತೃತ್ವದ ಸರ್ಕಾರದ ವಿದೇಶಾಂಗ ಖಾತೆ ಸಚಿವೆಯಾಗಿ ಕಾರ್ಯ ನಿರ್ವಹಿಸಿದ ಸುಷ್ಮಾ ಸ್ವರಾಜ್ ಅವರು ಬಹಳ ಉತ್ತಮವಾದ ಕೆಲಸಗಳನ್ನು ಮಾಡಿ ಪ್ರಧಾನಿ ಮೋದಿಯ ಮೆಚ್ಚುಗೆಗೆ ಪಾತ್ರರಾಗಿದ್ದರು.


ಇದೀಗ ಅವರನ್ನು ಕಳೆದುಕೊಂಡ ಪ್ರಧಾನಿ ಮೋದಿ ಅವರು, ಸುಷ್ಮಾ ಸ್ವರಾಜ್ ಅವರ  ಪಾರ್ಥಿವ ಶರೀರಕ್ಕೆ ಅಂತಿಮ ನಮನದ ವೇಳೆ ಕಂಬನಿ ಮಿಡಿದಿದ್ದಾರೆ. ಪಾರ್ಥಿವ ಶರೀರಕ್ಕೆ ಹೂಗುಚ್ಛ ಅರ್ಪಿಸಿ, ಶ್ರದ್ಧಾಂಜಲಿ ಸಲ್ಲಿಸಿದ ಮೋದಿ, ಅವರ
ಕುಟುಂಬಸ್ಥರೊಂದಿಗೆ ಮಾತನಾಡಿ ಸಾಂತ್ವನ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ